ಉಚಿತ ವಿದ್ಯುತ್ 'ಗೃಹಜ್ಯೋತಿ' ಯೋಜನೆ ಇಂದು ಮಧ್ಯರಾತ್ರಿಯಿಂದಲೇ ಆರಂಭ; ಯಾರಿಗೆಲ್ಲ ಉಚಿತ ವಿದ್ಯುತ್ ಸಿಗಲಿದೆ...ನೋಡಿ...

ಉಚಿತ ವಿದ್ಯುತ್ 'ಗೃಹಜ್ಯೋತಿ' ಯೋಜನೆ ಇಂದು ಮಧ್ಯರಾತ್ರಿಯಿಂದಲೇ ಆರಂಭ; ಯಾರಿಗೆಲ್ಲ ಉಚಿತ ವಿದ್ಯುತ್ ಸಿಗಲಿದೆ...ನೋಡಿ...


ಬೆಂಗಳೂರು: ಕಾಂಗ್ರೆಸ್​​​ ಸರ್ಕರದ ಗ್ಯಾರಂಟಿ ಯೋಜನೆಗಳ ಜಾರಿಗೆ ಕೌಂಟ್​​​ಡೌನ್​ ಶುರುವಾಗಿದೆ. ಜೂನ್​​ 12 ರಂದು ಶಕ್ತಿ ಯೋಜನೆ ಜಾರಿ ಮಾಡಿದ್ದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಇದೀಗ ಮತ್ತೆರಡು ಗ್ಯಾರಂಟಿಗಳಾದ ಅನ್ನಭಾಗ್ಯ ಮತ್ತು ಗೃಹಜ್ಯೋತಿ ಚಾಲನೆಗೂ ಮುಂದಾಗಿದೆ. ನುಡಿದಂತೆ ನಡೆಯುವ ಸರ್ಕರ ಎಂದಿರುವ ಸಿದ್ದರಾಮಯ್ಯ, ಜುಲೈ 1 ರಂದೇ ಅನ್ನಭಾಗ್ಯ ಮತ್ತು ಗೃಹಜ್ಯೋತಿ ಗ್ಯಾರಂಟಿಗಳನ್ನ ಈಡೇಸಲಿದ್ದಾರೆ. ಈಗಾಗಲೇ ಜೂನ್ 18ರಿಂದ ಗೃಹಜ್ಯೋತಿಗೆ ಅರ್ಜಿ ಆಹ್ವಾನಿಸಿದ್ದು, ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಗೃಹ ಜ್ಯೋತಿಗೆ ಸಖತ್ ರೆಸ್ಪಾನ್ಸ್ ಸಿಕ್ಕಿದ್ದು, 200 ಯೂನಿಟ್ ವಿದ್ಯುತ್ ಉಚಿತವಾಗಿ ಪಡೆಯಲು ಗ್ರಾಹಕರು ಮುಗಿಬೀಳುತ್ತಿದ್ದಾರೆ.  ಗೃಹಜ್ಯೋತಿ ಯೋಜನೆ ಅಡಿಯಲ್ಲಿ ನಾಳೆಯಿಂದ (ಜು 01ರ ರಾತ್ರಿ 12 ಗಂಟೆ) ಬಳಸುವ 200 ಯುನಿಟ್‌ ಒಳಗಿನ ಸರಾಸರಿ ಕರೆಂಟ್‌ಗೆ ಬಿಲ್‌ ಕಟ್ಟುವಂತಿಲ್ಲ.

ಜುಲೈ ತಿಂಗಳ ವಿದ್ಯುತ್​ ಬಿಲ್ ಆಗಸ್ಟ್ ತಿಂಗಳಲ್ಲಿ ಬರಲಿದೆ. ಬರುವ ಕರೆಂಟ್ ಬಿಲ್ ನಲ್ಲಿ ಶಕ್ತಿ ಯೋಜನೆಯಂತೆ ಗೃಹಜ್ಯೋತಿಯ ಉಚಿತ ಬಿಲ್ ಎಂದು ಹೆಸರು ಬರುವ ಸಾಧ್ಯತೆಗಳಿವೆ. 12 ತಿಂಗಳ ಬಿಲ್ ಸರಾಸರಿ ಆಧಾರದಲ್ಲಿ ಗೃಹಜ್ಯೋತಿಯ ವಿದ್ಯುತ್​ ಉಚಿತ ನೀಡಲಾಗುತ್ತದೆ. 12 ತಿಂಗಳ ಸರಾಸರಿ ಬಳಕೆ 200 ಯುನಿಟ್ ಇದ್ದರೂ ಫ್ರಿ ವಿದ್ಯುತ್​ ಸಿಗಲಿದೆ. 12 ತಿಂಗಳ ಸರಾಸರಿಗಿಂತ ಹೆಚ್ಚು ಬಳಸಿದ್ರೆ ಮಾತ್ರ ಬಿಲ್ ಬರಲಿದೆ. 12 ತಿಂಗಳ ಸರಾಸರಿಯ ಬಿಲ್​ನಲ್ಲಿ 200 ಯುನಿಟ್ ಜೊತೆ 10 ಯುನಿಟ್ ಜಾಸ್ತಿಯಾದರೂ ಸಹ ಬಿಲ್ ಕಟ್ಟಬೇಕಿದೆ. ಇನ್ನು ಈ ಗೃಹಜ್ಯೋತಿ ಅರ್ಜಿ ಸಲ್ಲಿಕೆಯನ್ನ ಜೂನ್ 18 ರಿಂದ ಆರಂಭ ಮಾಡಲಾಗಿದ್ದು, ಗೃಹಜ್ಯೋತಿಯ ಫಲಾನುಭವಿಗಳು ಒಟ್ಟು 2.14 ಕೋಟಿಯಷ್ಟು ಜನರಿದ್ದಾರೆ. ಈ ಪೈಕಿ ಒಟ್ಟು 11 ದಿನಗಳಲ್ಲಿ ಒಟ್ಟು 8099932 ರಷ್ಟು ಜನರು ಅರ್ಜಿ ಹಾಕಿದ್ದಾರೆ. ಇ‌ನ್ನು 1,33 00068 ಕೋಟಿಯಷ್ಟು ಜನ ನೊಂದಾಣಿಗೆ ಅರ್ಜಿ ಹಾಕಬೇಕಿದೆ.

ಗೃಹ ಜ್ಯೋತಿಗೆ ಯಾವ-ಯಾವ ನಿಗಮಕ್ಕೆ ಎಷ್ಟು ಅರ್ಜಿ ಸಲ್ಲಿಕೆ?

ಗೃಹಜ್ಯೋತಿ ಯೋಜನೆಗೆ ರಾಜ್ಯಾದ್ಯಂತ ಒಟ್ಟು 77 ಲಕ್ಷದ 20 ಸಾವಿರದ 207 ಮಂದಿ ನೋಂದಾಯಿಸಿಕೊಂಡಿದ್ದಾರೆ. ಬೆಸ್ಕಾಂನಲ್ಲಿ 31 ಲಕ್ಷ 55ಸಾವಿರದ 367 ಅರ್ಜಿಗಳು ಬಂದಿವೆ. ಸೆಸ್ಕಾಂನಲ್ಲಿ 12 ಲಕ್ಷದ 4 ಸಾವಿರದ 627 ಮಂದಿ ನೋಂದಾಯಿಸಿಕೊಂಡಿದ್ದಾರೆ. ಜೆಸ್ಕಾಂನಲ್ಲೂ 8 ಲಕ್ಷದ 15 ಸಾವಿರದ 968, ಹೆಸ್ಕಾಂನಲ್ಲಿ 15 ಲಕ್ಷದ 99 ಸಾವಿರದ 944 ಮಂದಿ ಫ್ರೀ ಕರೆಂಟ್​​ಗಾಗಿ ಅರ್ಜಿ ಸಲ್ಲಿಸಿದ್ದಾರೆ. HRECSನಲ್ಲಿ 36 ಸಾವಿರದ 906 ಮಂದಿ ಹಾಗೂ ಮೆಸ್ಕಾಂನಲ್ಲಿ 9 ಲಕ್ಷದ 7 ಸಾವಿರದ 396 ಮಂದಿ ನೋಂದಾಯಿಸಿಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article