ಮನೆಯ ಯಜಮಾನಿಗೆ ನೀಡಲಾಗುವ ಗೃಹಲಕ್ಷ್ಮಿ ಯೋಜನೆಯ 2 ಸಾವಿರ ಪಡೆಯಲು ಏನು ಮಾಡಬೇಕು...? ಇಲ್ಲಿದೆ ಸಂಪೂರ್ಣ ಮಾಹಿತಿ...
ಬೆಂಗಳೂರು: ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯಡಿ ನೀಡಲಾಗುವ 2 ಸಾವಿರ ರೂಪಾಯಿ ಪಡೆಯಲು ಏನು ಮಾಡಬೇಕು? ಅರ್ಜಿ ಸಲ್ಲಿಕೆ ಹೇಗೆ? ಮಹಿಳೆಯರ ಎಲ್ಲಾ ಗೊಂದಲಗಳಿಗೆ ಇಲ್ಲಿದೆ ಉತ್ತರ…
ಏನಿದು ಗೃಹಲಕ್ಷ್ಮಿ ಯೋಜನೆ?
ಇದು ರಾಜ್ಯದ ಮಹಿಳೆಯರಿಗಾಗಿ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಪ್ರಮುಖ ಯೋಜನೆಗಳಲ್ಲಿ ಒಂದು. ಪ್ರತಿ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಿಕ ಧನ ನೀಡುವ ಯೋಜನೆ ಇದಾಗಿದೆ.
ಜೂನ್ 15ರಿಂದಲೇ ಅರ್ಜಿ ಸ್ವೀಕಾರ
ಇದೇ ಜೂನ್ 15, ಗುರುವಾರದಿಂದಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಪಡೆಯಲಾಗುತ್ತದೆ.
ಜೂನ್ ಗುರುವಾರದಿಂದ 15ರಿಂದ ಜುಲೈ 15, ಶನಿವಾರದವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಜುಲೈ 16ರಿಂದ ಆಗಸ್ಟ್ 14ರವರೆಗೆ ಅರ್ಜಿಗಳನ್ನು ಪರಿಶೀಲಿಸಲಾಗುತ್ತದೆ.
ಆನ್ ಲೈನ್ ಹಾಗೂ ಆಫ್ ಲೈನ್ ಎರಡೂ ಕಡೆ ಅರ್ಹರು ಅರ್ಜಿ ಸಲ್ಲಿಸಬಹುದು.
ಆಗಸ್ಟ್ 15, ಮಂಗಳವಾರದಂದು ಸ್ವಾತಂತ್ರ್ಯ ದಿನಾಚರಣೆ ದಿನದಿಂದಲೇ ಮಹಿಳೆಯರ ಖಾತೆಗೆ 2 ಸಾವಿರ ರೂಪಾಯಿ ಹಣ ಜಮಾ ಮಾಡಲಾಗುತ್ತದೆ.
2 ಸಾವಿರ ರೂಪಾಯಿ ಯಾರೆಲ್ಲ ಪಡೆಯಬಹುದು?
ಪ್ರತಿ ಮನೆಯ ಯಜಮಾನಿ ಗೃಹಲಕ್ಷ್ಮಿ ಯೋಜನೆ ಅಡಿ 2 ಸಾವಿರ ರೂಪಾಯಿ ಪಡೆಯಬಹುದು
ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಸ್ತ್ರೀಯರು ಅರ್ಜಿ ಸಲ್ಲಿಸಬಹುದು
ವಿವಾಹಿತ ಮಹಿಳೆಯರು, ವಿಚ್ಛೇದಿತ ಮಹಿಳೆಯರು ಹಾಗೂ ನಿರ್ಗತಿಕ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಲೈಂಗಿಕ ಅಲ್ಪಸಂಖ್ಯಾತರೂ ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಡೀಟೆಲ್ಸ್ ನೀಡಬೇಕು
2 ಸಾವಿರ ರೂಪಾಯಿ ಅತ್ತೆಗೋ? ಸೊಸೆಗೋ?
ಈ ವಿಚಾರದ ಬಗ್ಗೆ ಸಾರ್ವಜನಿಕರು ಬಹಳ ಗೊಂದಲಕ್ಕೆ ಒಳಗಾಗಿದ್ದರು. ಗೃಹಲಕ್ಷ್ಮಿ ಯೋಜನೆಯಡಿ ಸಿಗುವ 2 ಸಾವಿರ ರೂಪಾಯಿ ಅತ್ತೆಗೆ ಸಿಗುತ್ತಾ? ಅಥವಾ ಸೊಸೆಗೆ ಸಿಗುತ್ತಾ ಎನ್ನುವ ಬಗ್ಗೆ ಚರ್ಚೆ ಶುರುವಾಗಿತ್ತು. ಆದರೆ ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿದೆ. ಅತ್ತೆಯಾದರೂ ಓಕೆ, ಸೊಸೆಯಾದರೂ ಓಕೆ. ಎಪಿಎಲ್ ಅಥವಾ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಮನೆಯ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಅತ್ತೆ ಖಾತೆಗೆ ಹಣ ಸೇರಬೇಕೋ ಅಥವಾ ಸೊಸೆ ಖಾತೆಗೆ ಹಣ ಸೇರಬೇಕೋ ಎನ್ನುವುದನ್ನು ಆ ಕುಟುಂಬಸ್ಥರೇ ನಿರ್ಧಾರ ಮಾಡಿ, ಸರ್ಕಾರಕ್ಕೆ ಮಾಹಿತಿ ನೀಡಬೇಕು ಅಂತ ಹೇಳಿದೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಆನ್ ಲೈನ್ ಅಥವಾ ಆಫ್ ಲೈನ್ ಎರಡೂ ವಿಧಾನದಿಂದ ಮಹಿಳೆಯರು ಅರ್ಜಿ ಸಲ್ಲಿಕೆ ಮಾಡಬಹುದು.
ಮನೆಯಲ್ಲಿ ಅತ್ತೆ ಅಥವಾ ಸೊಸೆ ಇಬ್ಬರಲ್ಲಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಮನೆ ಯಜಮಾನಿ ಕೆಲವು ಅಗತ್ಯ ಮಾಹಿತಿಗಳನ್ನು ಕಡ್ಡಾಯವಾಗಿ ನೀಡಬೇಕು.
ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ನಂಬರ್, ಬ್ಯಾಂಕ್ ಪಾಸ್‌ಬುಕ್‌ಗಳನ್ನು ಅರ್ಜಿ ಜೊತೆ ಸಲ್ಲಿಸಬೇಕು
ಕುಟುಂಬದ ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಅರ್ಜಿ ಜೊತೆ ಲಗತ್ತಿಸಬೇಕು.
ಕರ್ನಾಟಕ ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳು, ಅರ್ಜಿ ಪ್ರಕ್ರಿಯೆ ಮತ್ತು ಇತರ ಮಾಹಿತಿಯನ್ನು ಕರ್ನಾಟಕ ಸರ್ಕಾರವು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.
ಅರ್ಜಿ ಸಲ್ಲಿಕೆಗೆ ಯಾವೆಲ್ಲ ದಾಖಲೆ ಬೇಕು?
ಕರ್ನಾಟಕದಲ್ಲಿ ವಾಸಿಸುತ್ತಿರುವ ಬಗ್ಗೆ ನಿವಾಸದ ಪುರಾವೆ
ಅರ್ಜಿದಾರರ ಆಧಾರ್ ಕಾರ್ಡ್
ಅರ್ಜಿದಾರರ ಕುಟುಂಬದ ಪಡಿತರ ಚೀಟಿ.
ಜಾತಿ ಪ್ರಮಾಣ ಪತ್ರ. (ಅನ್ವಯವಾದಲ್ಲಿ)
ಆದಾಯ ಪ್ರಮಾಣಪತ್ರ.
ಮೊಬೈಲ್ ನಂಬರ್.
ಬ್ಯಾಂಕ್ ಖಾತೆ ವಿವರಗಳು, ಬ್ಯಾಂಕ್ ಪಾಸ್ ಬುಕ್
ಬೇರೆ ಸೌಲಭ್ಯ ಪಡೆಯುತ್ತಿದ್ದರೂ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಮಹಿಳೆಯರು ಬೇರೆ ರೀತಿಯ ಸೌಲಭ್ಯ ಪಡೆಯುತ್ತಿದ್ದರೂ ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದೇ ಎಂಬ ಪ್ರಶ್ನೆ ನಿಮ್ಮನ್ನು ಕಾಡುತ್ತಿರಬಹುದು. ಇದಕ್ಕೆ ಉತ್ತರ ಹೌದು! ಮನೆಯ ಯಜಮಾನಿ ವಿಧವಾ ವೇತನ, ವೃದ್ಧಾಪ್ಯ ವೇತನದಂತಹ ಇತರೇ ಸರ್ಕಾರದ ಹಣಕಾಸು ಯೋಜನೆಯ ಫಲಾನುಭವಿ ಆಗಿದ್ದರೂ ಆಕೆ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರೂಪಾಯಿ ಪಡೆಯಲು ಅರ್ಜಿ ಸಲ್ಲಿಸಬಹುದು.