
ಉಡುಪಿ - ಮಣಿಪಾಲ - ಹಿರಿಯಡಕ - ಪೆರ್ಡೂರು - ಮುಖ್ಯ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ
Friday, June 9, 2023
ಉಡುಪಿ - ಮಣಿಪಾಲ - ಪರ್ಕಳ - ಹಿರಿಯಡಕ - ಪೆರ್ಡೂರು ಮುಖ್ಯ ರಸ್ತೆ (ರಾಷ್ಟ್ರೀಯ ಹೆದ್ದಾರಿ 160 A) ಕಾಮಗಾರಿ ಪ್ರಗತಿಯಲ್ಲಿದ್ದು, ಇಂದು ದಿನಾಂಕ 09-06-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಹಿರಿಯಡ್ಕ ಭಾಗಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಮಳೆಗಾಲ ಸಮೀತಿಸುತ್ತಿರುವುದರಿಂದ ವಾಹನ ಸಂಚಾರಕ್ಕೆ ಸಮಸ್ಯೆ ಆಗದಂತೆ ಮತ್ತು ಸ್ಥಳೀಯರಿಗೆ ಸಮಸ್ಯೆ ಆಗದಂತೆ ಕಾಮಗಾರಿ ನಡೆಸಲು ಸಂಭಂದಿಸಿದ ಇಲಾಖಾಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಪಂಚಾಯತ್ ಸದಸ್ಯರಾದ ಹರೀಶ್ ಸಾಲಿಯಾನ್, ಶಕ್ತಿ ಕೇಂದ್ರ ಅಧ್ಯಕ್ಷರಾದ ವಿನಯ ಪೂಜಾರಿ, ದಯಾನಂದ್ ಪೂಜಾರಿ, ಶೇಖರ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ದಿನೇಶ್ ಮೆಂಡನ್, ಕೊಡ್ಲಾ ರೋಹಿತ್ ಶೆಟ್ಟಿ, ಬೆಳ್ಳಾರ್ಪಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.