ಮಣಿಪುರ ಹಿಂಸಾಚಾರ; ಪ್ರಚಾರದಾಹಿ, ಅಧಿಕಾರದಾಹಿ ಪ್ರಧಾನಿಗೆ ಯಾವ ಲೆಕ್ಕವೆಂಬುದೇ? 2002ರಲ್ಲಿ ಗುಜರಾತ್, 2023ರಲ್ಲಿ ಮಣಿಪುರ, ಜೀವಗಳು ಮುಖ್ಯವಲ್ಲ ಓಟುಗಳಷ್ಟೇ ಮುಖ್ಯ: ಪ್ರಧಾನಿ ಮೋದಿಯನ್ನು ಟೀಕಿಸಿದ ನಟ ಕಿಶೋರ್

ಮಣಿಪುರ ಹಿಂಸಾಚಾರ; ಪ್ರಚಾರದಾಹಿ, ಅಧಿಕಾರದಾಹಿ ಪ್ರಧಾನಿಗೆ ಯಾವ ಲೆಕ್ಕವೆಂಬುದೇ? 2002ರಲ್ಲಿ ಗುಜರಾತ್, 2023ರಲ್ಲಿ ಮಣಿಪುರ, ಜೀವಗಳು ಮುಖ್ಯವಲ್ಲ ಓಟುಗಳಷ್ಟೇ ಮುಖ್ಯ: ಪ್ರಧಾನಿ ಮೋದಿಯನ್ನು ಟೀಕಿಸಿದ ನಟ ಕಿಶೋರ್

ಬೆಂಗಳೂರು: ಕನ್ನಡ ಸಿನಿಮಾ ರಂಗದ ಹೆಸರಾಂತ ನಟ ಕಿಶೋರ್ ಮತ್ತೆ ಪ್ರಧಾನಿ ನರೇಂದ್ರ ಮೋದಿ ನಿರುದ್ಧ ಹರಿಹಾಯ್ದಿದ್ದಾರೆ. ಈಗಾಗಲೇ ಸಾಕಷ್ಟು ಬಾರಿ ಪ್ರಧಾನಿ  ವಿರುದ್ಧ ಮಾತನಾಡಿರುವ ಕಿಶೋರ್, ಈ ಬಾರಿ ಮಣಿಪುರದಲ್ಲಿ ನಡೆದ ಹಿಂಸಾಚಾರವನ್ನಿಟ್ಟುಕೊಂಡು ನರೇಂದ್ರ ಮೋದಿ ಅವರಿಗೆ ತಿವಿದಿದ್ದಾರೆ.

ಮಣಿಪುರ ಹಿಂಸಾಚಾರದಿಂದ  ನಲಗುತ್ತಿದೆ. ಅಲ್ಲಿ ಶಾಂತಿ ಸ್ಥಾಪಿಸಲು ಹಲವಾರು ತೀರಿಯಲ್ಲಿ ಕಸರತ್ತುಗಳು ನಡೆಯುತ್ತಿವೆ. ಮಣಿಪುರ ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕು ಎಂದು ವಿರೋಧ ಪಕ್ಷಗಳು ಪ್ರತಿಭಟನೆ ನಡೆಯುತ್ತಿವೆ. ನಿನ್ನೆಯಷ್ಟೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ ಮಣಿಪುರಕ್ಕೆ ಭೇಟಿ ನೀಡಿದ್ದಾರೆ. ಆದರೆ, ಪ್ರಧಾನಿ ಮೌನವಹಿಸಿದ್ದಾರೆ ಎನ್ನುವುದು ಕಿಶೋರ್ ಆರೋಪ. 

ಈ ಕುರಿತಾಗಿ ಕಿಶೋರ್ ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದು, ‘ಮನ್ ಕೀ ಬಾತ್ ನಲ್ಲಿ ಕಳೆದುಹೋದ ಮಣಿಪುರದ ಬಾತ್. ದೇಶದಲ್ಲಿ ಎಲ್ಲೇ ಅಶಾಂತಿ ನಡೆದಾಗಲೂ ಒಬ್ಬ ಪ್ರಧಾನಿ ಮಾಡಬಹುದಾದ ಮೂಲಭೂತ, ಅತೀ ಸರಳ, ಕಾಮನ್ ಸೆನ್ಸ್‍'ನ ಕೆಲಸ ಶಾಂತಿಯ ಕರೆ ಕೊಡುವುದು. ಅದನ್ನೂ ಕೂಡ ಮಾಡದ ಪ್ರಧಾನಿಯ ಮನಸ್ಥಿಯೇನು?’ ಎಂದು ಕಿಶೋರ್ ಪ್ರಶ್ನೆ ಮಾಡಿದ್ದಾರೆ.

ಮುಂದುವರೆದು, ‘ಕೋಟಿ ಓಟಿನ ದೇಶದಲ್ಲಿ ಕೇವಲ 2 ಲೋಕಸಭೆ ಸೀಟಿನ ಮಣಿಪುರದ ಸತ್ತುಹೋದ ನೂರು ಓಟು, ಮನೆ ಕಳೆದುಕೊಂಡ 50 ಸಾವಿರ ಓಟುಗಳು. ಈ ಪ್ರಚಾರದಾಹಿ, ಅಧಿಕಾರದಾಹಿ ಪ್ರಧಾನಿಗೆ ಯಾವ ಲೆಕ್ಕವೆಂಬುದೇ? 2002ರಲ್ಲಿ ಗುಜರಾತ್, 2023ರಲ್ಲಿ ಮಣಿಪುರ. ಜೀವಗಳು ಮುಖ್ಯವಲ್ಲ ಓಟುಗಳಷ್ಟೇ ಮುಖ್ಯ. ಇತಿಹಾಸಕ್ಕೆ ನೆನಪಿರಲಿ’ ಎಂದು ಕಿಶೋರ್ ಬರೆದುಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article