ನೇಜಾರು ನಾಲ್ವರ ಹತ್ಯಾ ಪ್ರಕರಣ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ ಆರೋಪಿ ಪ್ರವೀಣ್ ಚೌಗುಲೆ
Tuesday, November 28, 2023
ಉಡುಪಿ: ನೇಜಾರಿನ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಸುರಕ್ಷತೆ-ಭದ್ರತೆಯ ದೃಷ್ಟಿಯಿಂದ ಉಡುಪಿಯ ಹಿರಿಯಡ್ಕ ಜೈಲಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.
ನ.22ರಿಂದ ಹಿರಿಯಡ್ಕ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಪ್ರವೀಣ್ ಚೌಗುಲೆಯನ್ನು ಸುರಕ್ಷತೆಯ ಹಿನ್ನೆಲೆಯಲ್ಲಿ ಪ್ರತ್ಯೇಕ ಸೆಲ್ ಮತ್ತು ವಿಶೇಷ ಭದ್ರತೆಯೊಂದಿಗೆ ಇರಿಸಲಾಗಿತ್ತು. ಜಿಲ್ಲಾ ಕಾರಾಗೃಹದಲ್ಲಿನ ಭದ್ರತೆ ಕೊರತೆಯ ಹಿನ್ನೆಲೆಯಲ್ಲಿ ಆತನನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಜೈಲಾಧಿಕಾರಿಗಳು ಉಡುಪಿ ನ್ಯಾಯಾಲಯದಿಂದ ಅನುಮತಿಯನ್ನು ಪಡೆದುಕೊಂಡಿದ್ದರು.
ಬಂಧಿಖಾನೆ ಇಲಾಖೆಯ ಮೇಲಾಧಿಕಾರಿಗಳ ಅನುಮತಿ ಹಾಗೂ ನಿರ್ದೇಶನದಂತೆ ಪೊಲೀಸ್ ಭದ್ರತೆಯಲ್ಲಿ ಆರೋಪಿ ಪ್ರವೀಣ್ ಚೌಗುಲೆಯನ್ನು ಕರೆದೊಯ್ದು, ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಹಸ್ತಾಂತರಿಸಲಾಗಿದೆ.