ಸಿಬಿಐ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರ ಎತ್ತಿ ಹಿಡಿದ ಹೈಕೋರ್ಟ್; ಡಿಕೆಶಿಗೆ ಬಿಗ್ ರಿಲೀಫ್
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆ ವಹಿಸಿ ಹೊರಡಿಸಿದ್ದ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಇದರಿಂದ ಡಿ.ಕೆ.ಶಿವಕುಮಾರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ.
ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರ್ಕಾರದ ಆದೇಶವನ್ನು ಇದುವರೆಗೂ ಯಾರೂ ಪ್ರಶ್ನೆ ಮಾಡಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದ ಪರಿಗಣಿಸಲು ಸಾಧ್ಯವಿಲ್ಲ. ಅರ್ಜಿದಾರರು ಮನವಿ ಹಿಂಪಡೆಯಲಾಗಿದೆ ಎಂದು ಕೋರ್ಟ್ ತಿಳಿಸಿತು.
ಇನ್ನು ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರ ತಮ್ಮ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಡಿಕೆ ಶಿವಕುಮಾರ್ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯಲು ಹೈಕೋರ್ಟ್ ಅನುಮತಿ ನೀಡಿದೆ.