ವಿಶ್ವಕಪ್ ಟೂರ್ನಿ ಫೈನಲ್; ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ: ಭಾರತ ಬ್ಯಾಟಿಂಗ್!
ಅಹಮದಾಬಾದ್: ಗುಜರಾತಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿ ಕಾದಾಟ ನಡೆಸುತ್ತಿದ್ದು, ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆ ಮೂಲಕ ಭಾರತ ತಂಡ ಮೊದಲು ಬ್ಯಾಟ್ ಮಾಡಲಿದೆ.
ಭಾರತವು ಇಲ್ಲಿಯವರೆಗೂ ಆಡಿದ 10 ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಫೈನಲ್ ಗೆಲ್ಲುವ ನೆಚ್ಚಿನ ತಂಡವಾಗಿದೆ. ಅಂದ ಹಾಗೆ ಸೆಮಿಫೈನಲ್‌ನಲ್ಲಿ ಆಡಿಸಿದ್ದ ಅದೇ ಆಡುವ ಬಳಗವನ್ನು ಟೀಮ್ ಇಂಡಿಯಾ ಉಳಿಸಿಕೊಂಡಿದೆ. ಮತ್ತೊಂದೆಡೆ ಆಸ್ಟ್ರೇಲಿಯಾ ತಂಡ ಸೆಮಿಫೈನಲ್‌ನಲ್ಲಿ ಕಣಕ್ಕೆ ಇಳಿಸಿದ್ದ ಅದೇ ಪ್ಲೇಯಿಂಗ್ XI ಅನ್ನು ಆಡಿಸುತ್ತಿದೆ.
ಇನ್ನು ಆಸ್ಟ್ರೇಲಿಯಾ ತಂಡ ಲೀಗ್ ಹಂತದಲ್ಲಿ ಎರಡು ಪಂದ್ಯಗಳನ್ನು ಸೋತಿದ್ದು ಬಿಟ್ಟರೆ ಇನ್ನುಳಿದ 8 ಪಂದ್ಯಗಳಲ್ಲಿ ಸತತವಾಗಿ ಗೆಲುವು ಕಂಡಿದೆ. ಈ ಕಾರಣದಿಂದಲೇ ಫೈನಲ್‌ಗೆ ಪ್ರವೇಶಿಸಲಿದೆ. ಅಂದ ಹಾಗೆ ಲೀಗ್ ಹಂತದಲ್ಲಿ ಭಾರತ ತಂಡ 6 ವಿಕೆಟ್‌ಗಳಿಂದ ಆಸ್ಟ್ರೇಲಿಯಾ ತಂಡವನ್ನು ಮಣಿಸಿತ್ತು.
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜಾಶ್ ಇಂಗ್ಲಿಸ್ (ವಿ.ಕೀ), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಾಂಪ, ಜಾಶ್ ಹೇಝಲ್‌ವುಡ್