ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ: ಇಬ್ಬರ ಬಂಧನ

ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ: ಇಬ್ಬರ ಬಂಧನ

ಮಂಗಳೂರು: ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ ಪ್ರಕರಣವೊಂದು  ವರದಿಯಾಗಿದ್ದು, ಈ ಸಂಬಂಧ ಸಂಘಪರಿವಾರದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳೂರಿನ ಅಂಗಡಿಯೊಂದರಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಇಬ್ಬರು ಉದ್ಯೋಗಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ಯೆಶಾಯಲಾಗಿದ್ದು,  ಇಬ್ಬರು ಆರೋಪಿಗಳನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕ್ಕಲ್ ಎಂದು ಗುರುತಿಸಲಾಗಿದೆ.

ಸೋಮವಾರ ರಾತ್ರಿ ಸುಮಾರು 8 ಗಂಟೆಗೆ ಮಂಗಳೂರಿನ ಮುಳಿಹಿತ್ಲು ಎಂಬಲ್ಲಿನ ಎಂಎಸ್ ಸ್ಪೋರ್ಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನೂರುಲ್ಲಾ ಅಮೀನ್ ಹಾಗು ಸೌಜನ್ಯಾ ಎಂಬವರು ಮೊಬೈಲ್ ರಿಪೇರ್ ಮಾಡಿಸಿಕೊಂಡು ನಗರದ ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ದ್ವಿಚಕ್ರ ವಾಹನವೊಂದರಲ್ಲಿ ತೆರಳುವಾಗ ಈ ಇಬ್ಬರು ಆರೋಪಿಗಳು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಅನೈತಿಕ ಪೊಲೀಸ್ ಗಿರಿ ನಡೆಯಿದ್ದಾರೆ ಎಂದು ಆರೋಪಿಸಲಾಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 354 ರ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.


Ads on article

Advertise in articles 1

advertising articles 2

Advertise under the article