ಹೆಮ್ಮಾಡಿ ಬಳಿ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ವಾಹನ ಡಿಕ್ಕಿ; ಸಾವು
Thursday, February 22, 2024
ಉಡುಪಿ: ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಜಾಲಾಡಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ರಾತ್ರಿ ನಡೆದಿದೆ.
ಮೃತರನ್ನು ವಿಠಲ್(46) ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿ ಜಾಲಾಡಿ ಬಳಿ ಹೆದ್ದಾರಿ ದಾಟಲು ನಿಂತಿದ್ದರು. ಈ ವೇಳೆ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ತೆರಳುತ್ತಿದ್ದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ವಿಠಲ್ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.