5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಎಚ್.ಎಂ.ರೇವಣ್ಣ, ಉಪಾಧ್ಯಕ್ಷರಾಗಿ ಮೆಹ್ರೋಝ್ ಖಾನ್: ಸಮಿತಿಗೆ ಸಿಎಂ ಅನುಮೋದನೆ
Wednesday, February 28, 2024
ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸಮಿತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ.
ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರು ಅಧ್ಯಕ್ಷರಾಗಿ ಸಚಿವ ಸಂಪುಟ ದರ್ಜೆ ನೀಡಲಾಗಿದೆ. ಉಪಾಧ್ಯಕ್ಷರಾಗಿ ಮೆಹ್ರೋಝ್ ಖಾನ್, ಪುಷ್ಪಾ ಅಮರನಾಥ್, ಎಸ್.ಆರ್. ಪಾಟೀಲ್ ಮತ್ತು ಸೂರಜ್ ಹೆಗ್ಡೆ ಅವರ ಹೆಸರನ್ನು ಸಿಎಂ ಅನುಮೋದಿಸಿದ್ದಾರೆ.