ದೆಹಲಿಯ ಬಿಜೆಪಿ ಪ್ರಧಾನ ಕಛೇರಿ ಬಳಿ ಕೇಜ್ರಿವಾಲ್ ಬಂಧನ ವಿರೋಧಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಂದ ಪ್ರತಿಭಟನೆ
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಬಿಜೆಪಿ ಪ್ರಧಾನ ಕಛೇರಿ ಬಳಿಯಿರುವ ಐಟಿಒ ಬಳಿ ಪ್ರತಿಭಟನೆ ನಡೆಯುತ್ತಿದ್ದು, ಆ ಪ್ರದೇಶದಲ್ಲಿ ಗುಂಪು ಸೇರುವುದನ್ನು ನಿಷೇಧಿಸಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನಾಕಾರರು ಎಎಪಿ ಕೇಂದ್ರ ಕಚೇರಿಯಿಂದ ಬಿಜೆಪಿ ಕಚೇರಿಗೆ ಹೋಗುವ ರಸ್ತೆಯಲ್ಲಿ ಬ್ಯಾರಿಕೇಡ್ ತೆಗೆದಿದ್ದು, ಕಲ್ಲು ತೂರಾಟ ಕೂಡಾ ನಡೆದಿದೆ. ಪೊಲೀಸರು ಈ ಪ್ರದೇಶಕ್ಕೆ ಬರುವವರ ಗುರುತಿನ ಚೀಟಿಯನ್ನೂ ಪರಿಶೀಲಿಸುತ್ತಿದ್ದಾರೆ. ಗುರುವಾರ ಸಂಜೆ ಕೇಜ್ರಿವಾಲ್ ಬಂಧನದ ನಂತರ, ಎಎಪಿ ಬಿಜೆಪಿ ವಿರುದ್ಧ ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿತ್ತು.