
ತುಮಕೂರು ಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸಿಎಂ, ಗೃಹ ಸಚಿವರಿಗೆ ಒತ್ತಾಯ; ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಇನಾಯತ್ ಅಲಿ
Sunday, March 24, 2024
ತುಮಕೂರಿನಲ್ಲಿ ಭೀಕರ ಹತ್ಯೆಗೊಳಗಾದ ಬೆಳ್ತಂಗಡಿ ತಾಲೂಕಿನ ಇಸಾಕ್, ಶಾಹುಲ್ ಹಮೀದ್ ಹಾಗೂ ಇಮ್ತಿಯಾಝ್ ಸಿದ್ದೀಕ್ ನಿವಾಸಕ್ಕೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಇನಾಯತ್ ಅಲಿ, ಘಟನೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಲ್ಲಿ ಹಾಗೂ ಗೃಹ ಸಚಿವರಲ್ಲಿ ಮಾತನಾಡಿದ್ದೇನೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಲ್ಲಿಯೂ ಮನವಿ ಮಾಡಿದ್ದೇನೆಂದು ತಿಳಿಸಿದರು.