ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಪದಾಧಿಕಾರಿಗಳ ಸಭೆ; ವಿವಿಧ ಸಮಿತಿಗಳಿಗೆ ನೇಮಕಗೊಂಡ ಬ್ಲಾಕ್ ವ್ಯಾಪ್ತಿಯ ಸದಸ್ಯರನ್ನು ಅಭಿನಂದಿಸಿದ ಇನಾಯತ್ ಅಲಿ
Sunday, March 17, 2024
ರವಿವಾರ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಪಾಲ್ಗೊಂಡು ಮಾತನಾಡಿದರು.
ಈ ಸಂಧರ್ಭದಲ್ಲಿ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಪ್ರಾಧಿಕಾರ, ಅಕಾಡೆಮಿ ಹಾಗೂ ಸರ್ಕಾರದ ವಿವಿಧ ಸಮಿತಿಗಳಿಗೆ ನೇಮಕಗೊಂಡ ಬ್ಲಾಕ್ ವ್ಯಾಪ್ತಿಯ ಸದಸ್ಯರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.