ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಸಿಸಿಬಿ ಪೋಲೀಸರ ಬಲೆಗೆ ಬಿದ್ದ ಆರೋಪಿ; 1.50 ಲಕ್ಷ ಮೌಲ್ಯದ 6 ಕೆ.ಜಿ ಗ್ರಾಂ ಗಾಂಜಾ ವಶ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಸಿಸಿಬಿ ಪೋಲೀಸರ ಬಲೆಗೆ ಬಿದ್ದ ಆರೋಪಿ; 1.50 ಲಕ್ಷ ಮೌಲ್ಯದ 6 ಕೆ.ಜಿ ಗ್ರಾಂ ಗಾಂಜಾ ವಶ

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಕುಡುಪು ಪೆದಮಲೆ ಗ್ರಾಮದ ನಿವಾಸಿ ನಿಶಾಂತ್ ಶೆಟ್ಟಿ ಬಂಧಿತ ಆರೋಪಿ. ಈತನಿಂದ 1.50 ಲಕ್ಷ ಮೌಲ್ಯದ 6 ಕೆ.ಜಿ ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ಖರೀದಿಸಿ ತಂದು ಸಣ್ಣ ಸಣ್ಣ ಪ್ಯಾಕೆಟ್ ಮಾಡಿಕೊಂಡು ಮಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದು, ಈತ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಒಳಪೇಟೆಯಲ್ಲಿ ಗೂಡ್ಸ್ ಟೆಂಪೋದಲ್ಲಿ ಗಾಂಜಾ ಸಾಗಿಸುವಾಗ ಸಿಸಿಬಿ ಬಲೆಗೆ ಬಿದ್ದಿದ್ದಾನೆ. 

ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಒಟ್ಟು 9.11 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ಧ ಈಗಾಗಲೇ ಹಲ್ಲೆ, ಕಳ್ಳತನ ಪ್ರಕರಣ ಸೇರಿದಂತೆ ಒಟ್ಟು 10ಕ್ಕೂ ಹೆಚ್ಚು ಪ್ರಕರಣಗಳಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article