ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ಬೆನ್ನಲ್ಲೇ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ ನ್ಯಾಯಮೂರ್ತಿ ಅಭಿಜಿತ್
Tuesday, March 5, 2024
ಕೋಲ್ಕತಾ: ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ತಾವು ಬಿಜೆಪಿ ಸೇರುವುದಾಗಿ ಇಂದು ಘೋಷಣೆ ಮಾಡಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಭಿಜಿತ್ ಗಂಗೋಪಾಧ್ಯಾಯ, ಮಾರ್ಚ್ 7ರಂದು ಬಿಜೆಪಿ ಸೇರುವುದಾಗಿ ಸ್ಪಷ್ಟಪಡಿಸಿದ್ದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ರಾಷ್ಟ್ರೀಯ ಪಕ್ಷ ಬಿಜೆಪಿಗೆ ತಾನು ಸೇರುತ್ತಿದ್ದೇನೆ ಎಂದು ಹೇಳಿದ್ದಾರೆ.
ಅಭಿಜಿತ್ ಗಂಗೋಪಾಧ್ಯಾಯ ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು, ಸಿಜೆಐ ಡಿವೈ ಚಂದ್ರಚೂಡ್ ಮತ್ತು ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಅವರಿಗೆ ಕಳುಹಿಸಿದ್ದಾರೆ.