ಕಾಂಗ್ರೆಸ್ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸೊರಕೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

ಕಾಂಗ್ರೆಸ್ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸೊರಕೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

ಮಂಗಳೂರು: ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ವಿನಯ್ ಕುಮಾರ್ ಸೊರಕೆ ಅವರನ್ನು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಅಭಿನಂದಿಸಿದರು.



ಈ ಸಂದರ್ಭದಲ್ಲಿ NSUI ಜಿಲ್ಲಾಧ್ಯಕ್ಷರಾದ ಸೌರಭ್ ಬಲ್ಲಾಳ್, ನಾಯಕರಾದ ಯತೀಶ್ ಕರ್ಕೇರ, ಶರತ್ ಶೆಟ್ಟಿ, ಸತೀಶ್ ಕುಮಾರ್ ಮಂಚಿ, ಸಂಧ್ಯಾ ತಿಲಕ್‌ ರಾಜ್, ಸೂರಜ್ ಕರ್ಕೇರ, ಪ್ರದೀಪ್, ಶೆರಾನ್, ಸುಜನ್, ಫುರ್ಖಾನ್ ಇನ್ನಿತರರು ಉಪಸ್ಥಿತರಿದ್ದರು.


Ads on article

Advertise in articles 1

advertising articles 2

Advertise under the article