ದಕ್ಷಿಣ ಕನ್ನಡ ಜಿಲ್ಲೆ ಅಭಿವೃದ್ಧಿ ಕಂಡಿದ್ದು ಕಾಂಗ್ರೆಸ್ಸಿನಿಂದ; ಬಿಜೆಪಿ ನೀಡಿದ್ದು ಕೇವಲ ನಿರುದ್ಯೋಗ-ದುರಾಡಳಿತ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್; ಸುರತ್ಕಲ್-ಗುರುಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾವೂರಿನಲ್ಲಿ ಲೋಕಸಭಾ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇರುವ ಎಂಎಂಪಿಟಿ, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಎಂಸಿಎಫ್, MRPL, KREC ಆಗಿ ಇರಲಿ, ಬೇರೆ ಬೇರೆ ಕಾಲೇಜು, ಉದ್ಯೋಗ ಆಗಿರಲಿ, ಇದು ಕಾಂಗ್ರೆಸ್ಸಿನ ಕಾಣಿಕೆ ಆಗಿದೆ ಎಂದು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಬಣ್ಣಿಸಿದ್ದಾರೆ.
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಇಂದು ಕಾವೂರಿನಲ್ಲಿ ಲೋಕಸಭಾ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ನಮ್ಮ ಜಿಲ್ಲೆಯಲ್ಲಿ ಎಲ್ಲ ರೀತಿಯ ಅಭಿವೃದ್ಧಿಯ ಕಾರ್ಯಗಳು ನಡೆದಿರುವುದು ಕಾಂಗ್ರೆಸ್ ಕಾಲದಲ್ಲಿ. ಈಗ ಇಲ್ಲಿ ಎಷ್ಟೇ ಕಾಲೇಜುಗಳಿದ್ದರೂ ನಮ್ಮವರಿಗೆ ಸರಿಯಾದ ಉದ್ಯೋಗವಿಲ್ಲದೆ ಅಲೆದಾಡುವಂಥ ಪರಿಸ್ಥಿತಿ ಉಂಟಾಗಿದೆ ಎಂದು ಬಿಜೆಪಿ ವಿರುದ್ಧ ಪದ್ಮರಾಜ್ ಆಕ್ರೋಶ ಹೊರಹಾಕಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಲೋಕಸಭಾ ಚುನಾವಣೆಯ ಜಿಲ್ಲಾ ಉಸ್ತುವಾರಿಗಳಾದ ರಮಾನಾಥ ರೈ, ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹಾಗೂ ಜಿಲ್ಲಾ, ಬ್ಲಾಕ್ ಮಟ್ಟದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.