ಲೋಕಸಭಾ ಚುನಾವಣೆ; ಕರ್ನಾಟಕದಲ್ಲಿ ಏ.26, ಮೇ 7ಕ್ಕೆ ಎರಡು ಹಂತಗಳಲ್ಲಿ ಮತದಾನ
Saturday, March 16, 2024
ನವದೆಹಲಿ: ದೇಶವೇ ಕುತೂಹಲದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ ನಡೆಯಲಿದೆ.
ಏ.26 ಕ್ಕೆ ಮೊದಲ ಹಾಗೂ ಮೇ 7 ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ಕಳೆದ ಬಾರಿ ಯಾವಾಗ ಮತದಾನ ನಡೆದಿತ್ತು?
ಕಳೆದ ಬಾರಿ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆದಿತ್ತು. ಏ.18 ರಂದು 14 ಕ್ಷೇತ್ರಗಳಿಗೆ ಹಾಗೂ ಏ.23 ರಂದು 14 ಕ್ಷೇತ್ರಗಳಿಗೆ ಮತದಾನ ನಡೆದಿತ್ತು.