
ಉಡುಪಿ: ಮಾ.17ರಂದು ಬ್ರಾಹ್ಮಣ ಮಹಾಸಭಾದಿಂದ 'ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ'
ಉಡುಪಿ: ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಉಡುಪಿ ಇದರ ರಜತ ಮಹೋತ್ಸವದ 22ನೇ ಕಾರ್ಯಕ್ರಮದ ಸಂಭ್ರಮಾಚರಣೆಯ ಪ್ರಯುಕ್ತ ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಇದೇ ಮಾರ್ಚ್ 17ರಂದು ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.
ಈ ಬಗ್ಗೆ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಎಂ. ಶ್ರೀನಿವಾಸ ಬಲ್ಲಾಳ್ ಅವರು ಮಾಹಿತಿ ನೀಡಿ, ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ಶಿಬಿರದಲ್ಲಿ ಉಚಿತ ಆರೋಗ್ಯ ತಪಾಸಣೆ, ಶುಗರ್, ಬಿ.ಪಿ. ಈಸಿಜಿ, ದಂತ ತಪಾಸಣೆ ಮತ್ತು ಚಿಕಿತ್ಸೆ, ರೂಟೀನ್ ಶುಗರ್ ಮತ್ತು ಬ್ಲಡ್ ತಪಾಸಣೆ, ಕಣ್ಣಿನ ತಪಾಸಣೆ ಮತ್ತು ಚಿಕಿತ್ಸೆ, ಆಯುರ್ವೇದ ಪಂಚಕರ್ಮ ತಪಾಸಣೆ ಮತ್ತು ಚಿಕಿತ್ಸೆ, ಉಚಿತ ಔಷಧಿ ವಿತರಣೆ ನಡೆಯಲಿದೆ. ಸುಮಾರು 50 ಕ್ಕಿಂತಲೂ ಹೆಚ್ಚು ವೈದ್ಯರು ಮತ್ತು ಅವರ ಸಹಾಯಕರು ಭಾಗವಹಿಸಲಿದ್ದಾರೆ. ಸುಮಾರು 50 ಯುನಿಟ್ ಕ್ಕಿಂತಲೂ ಹೆಚ್ಚು ರಕ್ತ ಸಂಗ್ರಹ ಮತ್ತು 500ಕ್ಕಿಂತಲೂ ಹೆಚ್ಚು ಜನ ಆರೋಗ್ಯ ತಪಾಸಣೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಂ. ಮಂಜುನಾಥ ಉಪಾಧ್ಯಾಯ, ರಜತ ಮಹೋತ್ಸವ ಸಮಿತಿ ಸಂಚಾಲಕ ಶ್ರೀಕಾಂತ ಉಪಾಧ್ಯಾಯ, ಕಾರ್ಯದರ್ಶಿ ಜಯರಾಮ ಆಚಾರ್ಯ, ಕೋಶಾಧಿಕಾರಿ ಜನಾರ್ದನ ಭಟ್, ಮಹಾಸಭಾದ ಕಾರ್ಯದರ್ಶಿ ಶ್ರೀನಿವಾಸ ಯು.ಬಿ., ಕೋಶಾಧಿಕಾರಿ ನಾರಾಯಣದಾಸ್ ಉಡುಪ ಇದ್ದರು.