
ಮಾರ್ಚ್ 28ರಂದು ಕಾವೂರುನಲ್ಲಿ ಇನಾಯತ್ ಅಲಿ ನೇತೃತ್ವದಲ್ಲಿ 'ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ'
Tuesday, March 26, 2024
ಸುರತ್ಕಲ್: ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಮಾರ್ಚ್ 28ರ ಗುರುವಾರದಂದು ಬೆಳಿಗ್ಗೆ 10:30ಕ್ಕೆ 'ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ'ಯು ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರು, ದ.ಕ ಲೋಕಸಭಾ ಚುನಾವಣಾ ಪ್ರಚಾರ ಉಸ್ತುವಾರಿ ರಮಾನಾಥ ರೈ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಸಹಿತ ಹಲವು ರಾಜ್ಯ, ಜಿಲ್ಲಾ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.