ಅರವಿಂದ್ ಕೇಜ್ರಿವಾಲ್ ಬಂಧನ ವಿರೋಧಿ ಇಂಡಿಯಾ ಮೈತ್ರಿಕೂಟದಿಂದ ಮಾರ್ಚ್ 31ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ 'ಮಹಾ ರ್‍ಯಾಲಿ'

ಅರವಿಂದ್ ಕೇಜ್ರಿವಾಲ್ ಬಂಧನ ವಿರೋಧಿ ಇಂಡಿಯಾ ಮೈತ್ರಿಕೂಟದಿಂದ ಮಾರ್ಚ್ 31ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ 'ಮಹಾ ರ್‍ಯಾಲಿ'

 

ನವದೆಹಲಿ: 'ದೇಶದ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಲು' ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಮಾರ್ಚ್ 31 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ 'ಮಹಾ ರ್‍ಯಾಲಿ' ನಡೆಸಲಿದೆ ಎಂದು ಎಎಪಿ ನಾಯಕ ಗೋಪಾಲ್ ರೈ ಭಾನುವಾರ ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (55) ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ಬಂಧಿಸಿದ ನಂತರ ಈ ಪ್ರಕಟಣೆ ಬಂದಿದೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಇಂಡಿಯಾ ಮೈತ್ರಿಕೂಟದ ಎಎಪಿ ಮತ್ತು ಕಾಂಗ್ರೆಸ್ ನಾಯಕರು ರ್‍ಯಾಲಿಯನ್ನು ಘೋಷಿಸಿದರು.

'ದೇಶದಲ್ಲಿ ಈಗ ಏನಾಗುತ್ತಿದೆಯೋ ಅದರ ವಿರುದ್ಧ ನಾವು ಮಾರ್ಚ್ 31ರಂದು ರಾಮಲೀಲಾ ಮೈದಾನದಲ್ಲಿ 'ಮಹಾ ರ್‍ಯಾಲಿ' ನಡೆಸುತ್ತೇವೆ. ಇಂಡಿಯಾ ಮೈತ್ರಿಕೂಟದ ಎಲ್ಲಾ ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ' ಎಂದು ಎಎಪಿಯ ದೆಹಲಿ ಸಂಚಾಲಕ ಗೋಪಾಲ್ ರೈ ಹೇಳಿದ್ದಾರೆ.

'ಪ್ರಜಾಪ್ರಭುತ್ವ ಮತ್ತು ದೇಶವು ಅಪಾಯದಲ್ಲಿದೆ. ಹೀಗಾಗಿ, ಇಂಡಿಯಾ ಮೈತ್ರಿಕೂಟದ ಪಕ್ಷಗಳು ದೇಶದ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಲು ಈ 'ಮಹಾ ರ್‍ಯಾಲಿ' ನಡೆಸಲಿವೆ' ಎಂದು ರೈ ಹೇಳಿದರು.

ಕಾಂಗ್ರೆಸ್‌ನ ದೆಹಲಿ ಘಟಕದ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ಮಾತನಾಡಿ, ವಿರೋಧ ಪಕ್ಷಗಳಿಗೆ ಸಮಾನ ಅವಕಾಶ ನೀಡುತ್ತಿಲ್ಲ ಮತ್ತು ತಮ್ಮ ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ವಿಪಕ್ಷಗಳ ನಾಯಕರನ್ನು ಗುರಿಯಾಗಿಸಿಕೊಳ್ಳಲಾಗುತ್ತಿದೆ. ಮುಖ್ಯಮಂತ್ರಿಯೊಬ್ಬರನ್ನು ಬಂಧಿಸಲಾಗಿದೆ ಎಂದರು.

ಮಾರ್ಚ್ 31 ರಂದು ನಡೆಯಲಿರುವ ಮಹಾ ರ್‍ಯಾಲಿ ರಾಜಕೀಯ ಮಾತ್ರವಲ್ಲ, ದೇಶದ ಪ್ರಜಾಪ್ರಭುತ್ವವನ್ನು ಉಳಿಸುವ ಮತ್ತು ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಧ್ವನಿ ಎತ್ತುವ ಕರೆಯಾಗಿದೆ ಎಂದು ಅವರು ಹೇಳಿದರು.

Ads on article

Advertise in articles 1

advertising articles 2

Advertise under the article