ಬಿಜೆಪಿ ಟಿಕೆಟ್ ಕೈ ತಪ್ಪಿದ ಬಗ್ಗೆ ನಳಿನ್ ಕುಮಾರ್ ಕಟೀಲ್, ಪ್ರತಾಪ ಸಿಂಹ ಹೇಳಿದ್ದೇನು ಗೊತ್ತೇ...?

ಬಿಜೆಪಿ ಟಿಕೆಟ್ ಕೈ ತಪ್ಪಿದ ಬಗ್ಗೆ ನಳಿನ್ ಕುಮಾರ್ ಕಟೀಲ್, ಪ್ರತಾಪ ಸಿಂಹ ಹೇಳಿದ್ದೇನು ಗೊತ್ತೇ...?

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಬಿಜೆಪಿ ಎರಡನೇ ಪಟ್ಟಿ ಬುಧವಾರ ಬಿಡುಗಡೆ  ಆಗಿದೆ. ಬಿಡುಗಡೆ ಆಗಿರುವ ಎರಡನೇ ಪಟ್ಟಿಯಲ್ಲಿ ಕರ್ನಾಟಕದ 20 ಮಂದಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ. ಈ ಬಾರಿ ಹಾಲಿ ಸಂಸದರಿಗೆ ಶಾಕ್​ ಉಂಟಾಗಿದ್ದು ಹೊಸಬರಿಗೆ ಲಕ್ ಖುಲಾಯಿಸಿದೆ. 2ನೇ ಸಾರಿ ಗೆದ್ದು ಹ್ಯಾಟ್ರಿಕ್‌ ಗೆಲುವಿ ಕನಸು ಕಂಡಿದ್ದ ಪ್ರತಾಪ್‌ ಸಿಂಹಗೆ ಮೈಸೂರು-ಕೊಡಗು ಕ್ಷೇತ್ರದಲ್ಲಿ ಈ ಸಾರಿ ಟಿಕೆಟ್ ಕೈತಪ್ಪಿದೆ. ಬದಲಾಗಿ ಮೈಸೂರು ರಾಜಮನೆತನದ ಯದುವೀರ್ ಕೃಷ್ಣರಾಜ ಒಡೆಯರ್‌ಗೆ ಸಿಕ್ಕಿದೆ.

ಇತ್ತ ಟಿಕೆಟ್​ ಘೋಷಣೆಯಾಗುತ್ತಿದ್ದಂತೆ ಟ್ವೀಟ್​ ಮಾಡಿರುವ ಸಂಸದ ಪ್ರತಾಪ್​ ಸಿಂಹ ಯದುವೀರ ಒಡೆಯರ್​ಗೆ ಅಭಿನಂದನೆ ತಿಳಿಸಿದ್ದಾರೆ. ಕೂಡಲೇ ಚುನಾವಣೆ ತಯಾರಿ ಆರಂಭಿಸೋಣ, ಪ್ರಚಾರಕ್ಕಿಳಿಯೋಣ ದೇಶಕ್ಕಾಗಿ, ಮೋದಿಗಾಗಿ ಎಂದು ಟ್ವೀಟ್‌ ಮಾಡಿದ್ದಾರೆ.

ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯಿಸಿದ್ದು, ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಟ್ ಚೌಟಾಗೆ ಅಭಿನಂದಿಸುವೆ. ಕಳೆದ 15 ವರ್ಷಗಳಿಂದ ಪಕ್ಷ ನನಗೆ ಅವಕಾಶವನ್ನ ಕೊಟ್ಟಿದೆ. ಮತದಾರರು 15 ವರ್ಷಗಳಿಂದ ಆಶೀರ್ವಾದ ಮಾಡಿದ್ದಾರೆ. ರಾಜಕಾರಣಕ್ಕೆ ಯುವಕರು ಬರಬೇಕು. ಪಕ್ಷ ತೆಗೆದುಕೊಂಡಿರುವ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.

ರಾಜ್ಯ ಘಟಕದ ಅಧ್ಯಕ್ಷನಾಗಿ ಕೆಲಸ ಮಾಡುವ ಅವಕಾಶ ಕೊಟ್ಟಿದೆ. ಪಕ್ಷದ ರಾಜ್ಯಾಧ್ಯಕ್ಷನಾಗಿ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಪಕ್ಷ ಏನು ಹೇಳುತ್ತೋ ಅದನ್ನ ಮಾಡುವವನು ನಾನು. ನನಗೆ ಕೊಟ್ಟ ಸಹಕಾರ ಕ್ಯಾ.ಬ್ರಿಜೇಶ್​ ಚೌಟಾಗೆ ಕೊಡಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ನಳಿನ್ ಕುಮಾರ್ ಕಟೀಲು ಮನವಿ ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article