ಮಣಿಪಾಲದಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗೆ ದುಷ್ಕರ್ಮಿಗಳ ತಂಡದಿಂದ ಹಲ್ಲೆ; ವೀಡಿಯೋ ವೈರಲ್
Monday, March 25, 2024
ಉಡುಪಿ: ಮಣಿಪಾಲದಲ್ಲಿ ವಿದ್ಯಾರ್ಥಿ ಮೇಲೆ ಕ್ಷುಲ್ಲಕ್ಕ ಕಾರಣಕ್ಕೆ ಗುಂಪೊಂದರಿಂದ ಹಲ್ಲೆ ನಡೆದಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.
ಸುಮಾರು ಐದಾರು ಮಂದಿಯಿದ್ದ ತಂಡವೊಂದು ವಿದ್ಯಾರ್ಥಿಯೋರ್ವನನ್ನು ಅಟ್ಟಾಡಿಸಿ ಕೊಂಡು ಬಂದು ,ಅಪಾರ್ಟ್ ಮೆಂಟ್ ಗೆ ನುಗ್ಗಿ ಯದ್ವಾತದ್ವಾ ಹಲ್ಲೆಗೈದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಣಿಪಾಲದ ಸರಳಬೆಟ್ಟುವಿನ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿರುವ ಮಣಿಪಾಲದ ಎಂಐಟಿ ಯ ಬಿ.ಟೆಕ್ ವಿದ್ಯಾರ್ಥಿ ಅಭಿಷೇಕ್ (23) ಎಂಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.