
ನೇಜಾರು ತಾಯಿ-ಮೂವರು ಮಕ್ಕಳ ಕಗ್ಗೊಲೆ ಪ್ರಕರಣ; ಆರೋಪಿ ಪ್ರವೀಣ್ ಚೌಗುಲೆಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು
Wednesday, March 27, 2024
ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಬುಧವಾರ ಉಡುಪಿ ಜಿಲ್ಲಾ ಎರಡನೇ ಹೆಚ್ಚ್ಚುವರಿ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಕರೆ ತರಲಾಗಿದ್ದು, ಪ್ರಕರಣದ ತನಿಖಾಧಿಕಾರಿ ಕೃಷ್ಣ ಎಸ್.ಕೆ. ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಈ ವೇಳೆ ಚಾರ್ಜ್ ವಾಚಿಸುವ ಪ್ರಕ್ರಿಯೆಯನ್ನು ನಡೆಯಿತು. ಬಳಿಕ ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಜೈಲಿಗೆ ಕರೆದೊಯ್ಯಲಾಯಿತು. ಈ ಸಂದರ್ಭದಲ್ಲಿ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವ ಪ್ರಸಾದ್ ಆಳ್ವ ಹಾಜರಿದ್ದರು.