ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣ; ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣ; ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ಉಡುಪಿ: ಮಲ್ಪೆ ಪೊಲೀಸ್‌ ಠಾಣೆ ವ್ಯಾಪ್ತಿಯ ನೇಜಾರುನಲ್ಲಿ 2023ರ ನವೆಂಬರ್ 12 ರಂದು ನಡೆದ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ 2ನೇ ಬಾರಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿ ಶನಿವಾರ ಆದೇಶ ನೀಡಿದೆ.

ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಚೌಗುಲೆ ಮಾ.13ರಂದು ಎರಡನೇ ಬಾರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗೆ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಮಾ.27ರಂದು ಆಕ್ಷೇಪಣೆ ಸಲ್ಲಿಸಿದ್ದರು. ಈ ಕುರಿತು ಆರೋಪಿ ಪರ ವಕೀಲ ರಾಜೇಶ್ ಹಾಗೂ ವಿಶೇಷ ಸರಕಾರಿ ಅಭಿಯೋಜಕರ ಮಧ್ಯೆ ವಾದ ಪ್ರತಿವಾದಗಳು ನಡೆದವು. ಎರಡು ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ ಜಾಮೀನು ಅರ್ಜಿಯ ಕುರಿತ ಅಂತಿಮ ಆದೇಶವನ್ನು ಮಾ.30ಕ್ಕೆ ನಿಗದಿ ಪಡಿಸಿ ಆದೇಶ ನೀಡಿದರು.

ಆರೋಪಿ ಮೇಲಿನ ಆರೋಪಗಳು ಎಫ್ ಎಸ್ ಎಲ್ ವರದಿ ಸೇರಿದಂತೆ ಇನ್ನಿತರ ಸಾಕ್ಷಿಗಳಿಂದ ಮೇಲ್ನೋಟಕ್ಕೆ ಕಂಡು ಬಂದಿದ್ದು ಜಾಮೀನು ನೀಡಿದರೆ ಸಾಕ್ಷಿಗಳಿಗೆ ಹೆದರಿಸುವ ಸಾಧ್ಯತೆ ಇದೆ. ನ್ಯಾಯಾಂಗ ಬಂಧನದಲ್ಲೂ ಆರೋಪಿಗೆ ಚಿಕಿತ್ಸೆ ಪಡೆಯುವ ಅವಕಾಶ ಇರುವುದರಿಂದ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವುದಾಗಿ ನ್ಯಾಯಾಧೀಶರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article