ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರದಿಂದ ರಮಝಾನ್ ಉಪವಾಸ ಆರಂಭ
Monday, March 11, 2024
ಮಂಗಳೂರು/ಉಡುಪಿ: ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಸೋಮವಾರ ಆಗಿರುವುದರಿಂದ ಮಂಗಳವಾರದಿಂದ (ಮಾ.12) ರಮಝಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ತಿಳಿಸಿದ್ದಾರೆ.
ಅದೇ ರೀತಿ ಕೇರಳದಲ್ಲಿ ರಂಝಾನ್ ತಿಂಗಳ ಚಂದ್ರ ದರ್ಶನವಾಗಿದ್ದರಿಂದ ಮಂಗಳವಾರದಿಂದ ರಮದಾನ್ ಉಪವಾಸ ಪ್ರಾರಂಭ ಆಗಿರುತ್ತದೆ ಎಂದು ಉಡುಪಿ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಪ್ರತ್ಯೇಕ ಹೇಳಿಕೆಯಲ್ಲಿ ಘೋಷಿಸಿದ್ದಾರೆ.