ಸಂವಿಧಾನ ಬದಲಾವಣೆ ಮಾಡುವ ಕೆಲಸಕ್ಕೆ ಹೊರಟರೆ ದೇಶದಲ್ಲಿ ರಕ್ತಪಾತವಾಗಲಿದೆ: ಎಚ್ಚರಿಕೆ ನೀಡಿದ ಸಿದ್ದರಾಮಯ್ಯ ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಅನ್ನೋದು ಬಿಜೆಪಿ ಹಿಡನ್ ಅಜೆಂಡಾ

ಸಂವಿಧಾನ ಬದಲಾವಣೆ ಮಾಡುವ ಕೆಲಸಕ್ಕೆ ಹೊರಟರೆ ದೇಶದಲ್ಲಿ ರಕ್ತಪಾತವಾಗಲಿದೆ: ಎಚ್ಚರಿಕೆ ನೀಡಿದ ಸಿದ್ದರಾಮಯ್ಯ ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಅನ್ನೋದು ಬಿಜೆಪಿ ಹಿಡನ್ ಅಜೆಂಡಾ

ಬೆಂಗಳೂರು: ಬಿಜೆಪಿಯವರು ಒಂದು ವೇಳೆ ಸಂವಿಧಾನ ಬದಲಾವಣೆ ಮಾಡುವ ಕೆಲಸಕ್ಕೆ ಹೊರಟರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರ ಸಂವಿಧಾನ ಬದಲಾವಣೆ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಹೆಗಡೆ ಈ ರೀತಿ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದರು. ನರೇಂದ್ರ ಮೋದಿ ಅವರು ಪ್ರಧಾನಿಯಾಗಿದ್ದಾಗಲೇ ಹೆಗಡೆ ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದರು. ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಸಂವಿಧಾನ ಬದಲಾವಣೆ ಮಾಡುವುದು ಬಿಜೆಪಿಯವರ ರಹಸ್ಯ ಅಜೆಂಡಾ. ಸಂವಿಧಾನಕ್ಕೆ ಅನಗತ್ಯ ತಿದ್ದುಪಡಿತರಲಾಗಿದೆ. ಅವುಗಳನ್ನು ಸರಿಪಡಿಸಬೇಕು. ಅದಕ್ಕೆ ಮೂರನೇ ಎರಡರಷ್ಟು ಬಹುಮತ ಬೇಕು ಎಂದು ಹೆಗಡೆ ಹೇಳಿದ್ದಾರೆ. ಅವರು ಜನತೆಯಲ್ಲಿ ಮೂರನೇ ಎರಡರಷ್ಟು ಬಹುಮತ ಕೇಳಿರುವುದು ದೇಶದ ಉದ್ಧಾರಕ್ಕಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಮನವಾದಿವನ್ನು ಸಮರ್ಥನೆ ಮಾಡಿಕೊಳ್ಳೋದು, ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಅನ್ನೋದು ಅವರ ಹಿಡನ್ ಅಜೆಂಡಾ. ಅದಕ್ಕೆ ಇಡೀ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು ಹಿಂದುಳಿಬದವರು ಎಲ್ಲರೂ ಅವರನ್ನು ವಿರೋಧ ಮಾಡುತ್ತಾರೆ. ಒಂದು ವೇಳೆ ಸಂವಿಧಾನ ಬದಲಾವಣೆಯ ಕೆಲಸ ಆದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಶನಿವಾರ ಮಾತನಾಡಿದ ಅನಂತ್ ಕುಮಾರ್ ಹೆಗಡೆ, ಕಾಂಗ್ರೆಸ್ ಪಕ್ಷದವರು ಆಡಳಿತದಲ್ಲಿದ್ದಾಗ ಸಂವಿಧಾನವನ್ನು ಹಲವು ಬಾರಿ ತಿರುಚಿದ್ದಾರೆ. ಬೇಡದೆ ಇರುವ ವಿಚಾರಗಳನ್ನೆಲ್ಲ ಸೇರಿಸಿ ಹಿಂದೂ ಸಮಾಜವನ್ನು ಗಮನಿಸುವ ರೀತಿ ಬದಲಾಯಿಸಿದ್ದಾರೆ. ಅವುಗಳನ್ನೆಲ್ಲ ಸರಿಪಡಿಸಬೇಕಿದೆ. ಆದರೆ, ಹಾಗೆ ಮಾಡಬೇಕಿದ್ದರೆ ಲೋಕಸಭೆಯಲ್ಲಿ ಮಾತ್ರವಲ್ಲದೆ ರಾಜ್ಯಸಭೆಯಲ್ಲಿ ಕೂಡ ನಮಗೆ ಬಹುಮತ ಬೇಕಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿಯು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕಿದೆ ಎಂದು ಹೇಳಿದ್ದರು.

ಈ ಹಿಂದೆ ಕೂಡ ಸಂವಿಧಾನ ಬದಲಾವಣೆಗೆ ಸಂಬಂಧಿಸಿ ಅವರು ನೀಡಿದ್ದ ಹೇಳಿಕೆ, ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಇದೀಗ ಹೆಗಡೆ ಮತ್ತೆ ಅಂತದ್ದೇ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ, ಅನಂತಕುಮಾರ್ ಹೆಗಡೆ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಅದು ಅವರ ವೈಯಕ್ತಿಕ ಹೇಳಿಕೆಯಾಗಿದ್ದು ಅದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದೆ.

Ads on article

Advertise in articles 1

advertising articles 2

Advertise under the article