ರಾಜ್ಯಸಭೆಗೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ನಾಮನಿರ್ದೇಶನ; ಟ್ವೀಟ್ ಮೂಲಕ ಅಭಿನಂದಿಸಿದ ಪ್ರಧಾನಿ ಮೋದಿ
Friday, March 8, 2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆಯಾಗಿರುವ ಡಾ.ಸುಧಾ ಮೂರ್ತಿ ಅವರು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ. ಅಲ್ಲದೆ, ಟ್ವೀಟ್ ಮೂಲಕ ಸುಧಾ ಮೂರ್ತಿ ಅವರನ್ನು ಅಭಿನಂದಿಸಿದ್ದಾರೆ.
ಖುಷಿಯ ವಿಚಾರವನ್ನು ಹಂಚಿಕೊಂಡಿರುವ ಅವರು, "ಭಾರತದ ರಾಷ್ಟ್ರಪತಿಗಳು ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರಿ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾಮೂರ್ತಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ 'ಪ್ರಬಲ ಸಾಕ್ಷಿಯಾಗಿದೆ. ನಾರಿ ಶಕ್ತಿ', ನಮ್ಮ ದೇಶದ ಭವಿಷ್ಯ ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ರಾಜ್ಯಸಭೆ ಸದಸ್ಯೆಯಾಗಿ ಅವರ ಮುಂದಿನ ಪಯಣ ಶುಭಕರವಾಗಿರಲಿ." ಎಂದು ಆಶಯ ವ್ಯಕ್ತಪಡಿಸಿದ್ದಾರೆ.