ಕುಂದಾಪುರ: ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆತ್ಮಹತ್ಯೆ
Thursday, March 21, 2024
ಉಡುಪಿ: ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಎಸ್ (52) ಅವರು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಸುಮಾರು 28 ವರ್ಷಗಳ ಕಾಲ ಸೊಸೈಟಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬುಧವಾರ ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಕಚೇರಿಯಿಂದ ಯಾರಿಗೂ ತಿಳಿಸದೆ ನೇರವಾಗಿ ಮನೆಗೆ ಹೋಗಿ, ಮಹಡಿಯ ಕೋಣೆಯಲ್ಲಿ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.