ನಾಳೆ ನಡೆಯುವ  ಉಡುಪಿ ಜಿಲ್ಲಾ ಮಟ್ಟದ 'ಗ್ಯಾರಂಟಿ' ಸಮಾವೇಶದಲ್ಲಿ ಭಾಗವಹಿಸುವಂತೆ ಶೇಖ್ ವಹೀದ್ ಮನವಿ

ನಾಳೆ ನಡೆಯುವ ಉಡುಪಿ ಜಿಲ್ಲಾ ಮಟ್ಟದ 'ಗ್ಯಾರಂಟಿ' ಸಮಾವೇಶದಲ್ಲಿ ಭಾಗವಹಿಸುವಂತೆ ಶೇಖ್ ವಹೀದ್ ಮನವಿ

ಉಡುಪಿ: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪಂಚ ಗ್ಯಾರಂಟಿಯ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಭಾಗವಹಿಸುವಂತೆ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಶೇಖ್ ವಹೀದ್ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮಾ.13 ರ ಬುಧವಾರ ಬೆಳಿಗ್ಗೆ 11.ಗಂಟೆಗೆ ಉಡುಪಿ ನಗರದ ಮಹಾತ್ಮ ಗಾಂಧೀ ಮೆಮೋರಿಯಲ್ ಕಾಲೇಜಿನ ಆರೂರು ಲಕ್ಷ್ಮೀ ನಾರಾಯಣ ಕ್ರೀಡಾಂಗಣ (MGM)ದಲ್ಲಿ ಬೃಹತ್ ಗ್ಯಾರಂಟಿ ಸಮಾವೇಶ ನಡೆಯಲಿದ್ದು, ಈ ಕಾರ್ಯಕ್ರಮವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ಚುನಾವಣಾ ಪೂರ್ವದಲ್ಲಿ ರಾಜ್ಯದ ಬಡ ಜನರ ಆಶೋತ್ತರಗಳನ್ನು ಪೂರೈಸಲು ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸರಕಾರ ನಡೆದುಕೊಂಡಿದೆ.

ಪಂಚ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು, ಕೊಟ್ಟ ಮಾತನ್ನು ಉಳಿಸಿಕೊಂಡ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತ ಬಂಧುಗಳು ಆಗಮಿಸಿ ರಾಜ್ಯ ಸರಕಾರಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕಾಗಿ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ  ಶೇಖ್ ವಹೀದ್ ವಿನಂತಿಸಿ ಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article