ಲೋಕಸಭೆ ಚುನಾವಣೆಗೆ ಮೂಹುರ್ತ ಫಿಕ್ಸ್: ಏಪ್ರಿಲ್ 19 ರಿಂದ 7 ಹಂತಗಳಲ್ಲಿ ನಡೆಯಲಿದೆ ಚುನಾವಣೆ; ಜೂ. 4ಕ್ಕೆ ಫಲಿತಾಂಶ
Saturday, March 16, 2024
ಹೊಸದಿಲ್ಲಿ: ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಚುನಾವಣೆ, ಮತದಾನ ಹಾಗೂ ಫಲಿತಾಂಶಕ್ಕೆ ಸಂಬಂಧಿಸಿದ ಮಾಹಿತಿ ಪ್ರಕಟಿಸಿದ್ದಾರೆ.
ಇಂದು ದೆಹಲಿಯ ವಿಜ್ಞಾನಭವನದಲ್ಲಿ ಹೊಸದಾಗಿ ನೇಮಕಗೊಂಡ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಲೋಕಸಭೆಯ ಚುನಾವಣೆ ಏಳು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತ 20ನೇ ಮಾರ್ಚ್ ಅಧಿಸೂಚನೆ ಹೊರಡಲಿದೆ. 19ರ ಏಪ್ರಿಲ್ ಮೊದಲ ಹಂತದ ಚುನಾವಣೆ ನಡೆಯಲಿದೆ.
2024ರ ಲೋಕಸಭೆ ಚುನಾವಣೆಗೆ ಶನಿವಾರ ಮೂಹುರ್ತ ಫಿಕ್ಸ್ ಮಾಡಿದ್ದು, ಏಪ್ರಿಲ್ 19 ರಿಂದ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ ಮತ್ತು ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದರು.