ಸಿರಿಯಾದಲ್ಲಿರುವ ಇರಾನ್ ದೂತಾವಾಸ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ; ಇರಾನಿನ IRGC  ಕಮಾಂಡರ್ ಸೇರಿದಂತೆ 11 ಮಂದಿ ಸಾವು

ಸಿರಿಯಾದಲ್ಲಿರುವ ಇರಾನ್ ದೂತಾವಾಸ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ; ಇರಾನಿನ IRGC ಕಮಾಂಡರ್ ಸೇರಿದಂತೆ 11 ಮಂದಿ ಸಾವು

 

ಡಮಾಸ್ಕಸ್:  ಸಿರಿಯಾದಲ್ಲಿರುವ ಇರಾನ್ ದೂತಾವಾಸ ಕಚೇರಿ ಮೇಲೆ ಇಸ್ರೇಲ್ ಸೋಮವಾರ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 11 ಜನರು ಮೃತಪಟ್ಟಿದ್ದಾರೆ. 

ಈ ಕೃತ್ಯವು ಸಿರಿಯಾದಲ್ಲಿರುವ ಇರಾನ್‌ನ ಮಿಲಿಟರಿ ಅಧಿಕಾರಿಗಳನ್ನು ಗುರಿಯಾಗಿಸುವ ಸಂಬಂಧ ಇಸ್ರೇಲ್‌ನಿಂದ ಸ್ಪಷ್ಟ ಸಂದೇಶವಾಗಿದೆ ಎನ್ನಲಾಗಿದೆ. ಇರಾನ್ ಮತ್ತು ಆ ದೇಶದ ಮಿಲಿಟರಿ ಅಧಿಕಾರಿಗಳು ಇಸ್ರೇಲ್ ವಿರುದ್ಧ ಗಾಜಾದಲ್ಲಿ ಮತ್ತು ಲೆಬನಾನ್ ಗಡಿಯಲ್ಲಿ ಹೋರಾಡುತ್ತಿರುವ ಗುಂಪುಗಳನ್ನು ಬೆಂಬಲಿಸುವುದಕ್ಕೆ ಇಸ್ರೇಲ್ ಆಕ್ಷೇಪ ವ್ಯಕ್ತಪಡಿಸುತ್ತಿದೆ.

ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಇನ್ನೊಬ್ಬ ಉನ್ನತ ಶ್ರೇಣಿಯ ಅಧಿಕಾರಿ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ಹಾದಿ ಹಾಜಿ ರಹೀಮಿ ಹಾಗೂ ಏಳು ಮಂದಿ ಸದಸ್ಯರು ಕೂಡ ಹತ್ಯೆಯಾದವರಲ್ಲಿ ಸೇರಿದ್ದಾರೆ.

ದಾಳಿಯ ಬಗ್ಗೆ ಇಸ್ರೇಲ್ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಇಸ್ರೇಲ್ ಹೇಳಿದೆ. ದಾಳಿಗೆ ಕಠಿಣ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಹೇಳಿದೆ. ಇದು ಇಸ್ರೇಲ್ ಮತ್ತು ಇರಾನ್‌ನ ಮಿತ್ರರಾಷ್ಟ್ರಗಳ ನಡುವೆ ಇನ್ನೂ ಹೆಚ್ಚಿನ ಹಿಂಸಾತ್ಮಕ ದಾಳಿಗಳು ನಡೆಯುವ ಮುನ್ಸೂಚನೆ ನೀಡಿವೆ.

ಮೃತರಲ್ಲಿ ಎಂಟು ಇರಾನಿಯನ್ನರು, ಇಬ್ಬರು ಸಿರಿಯನ್ನರು ಮತ್ತು ಒಬ್ಬ ಲೆಬನೀಸ್ ಸೇರಿದ್ದಾರೆ. ಅವರೆಲ್ಲರೂ ಹೋರಾಟಗಾರರು. ನಾಗರಿಕರು ಯಾರೂ ಮೃತಪಟ್ಟಿಲ್ಲ ಎಂದು ಸಿರಿಯಾದಲ್ಲಿನ ಮೂಲಗಳು ತಿಳಿಸಿವೆ.

ದಾಳಿಯು ಸಂಪೂರ್ಣ ಕಟ್ಟಡವನ್ನು ನಾಶಪಡಿಸಿದೆ. ಒಳಗಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಗಾಯಗೊಂಡರು ಮತ್ತು ಮೃತದೇಹಗಳನ್ನು ಹೊರತೆಗೆಯಲು, ಅವಶೇಷಗಳಡಿಯಿಂದ ಗಾಯಗೊಂಡವರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ ಎಂದು ಸಿರಿಯಾದ ರಕ್ಷಣಾ ಸಚಿವಾಲಯ ತಿಳಿಸಿದೆ.

ಸಿರಿಯಾದ ವಿದೇಶಾಂಗ ಸಚಿವ ಫೈಸಲ್ ಮೆಕ್ದಾದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮಾತನಾಡಿ, ದಾಳಿಯನ್ನು ಖಂಡಿಸಿದರು. ಇದು ಘೋರ ಭಯೋತ್ಪಾದಕ ದಾಳಿ. ಹಲವಾರು ಮುಗ್ಧ ಜನರನ್ನು ಕೊಲ್ಲಲಾಗಿದೆ ಎಂದು ಅವರು ಹೇಳಿದ್ದಾರೆ.

ದಾಳಿ ಸಂಬಂಧಿತ ಇನ್ನಷ್ಟು ವಿವರ...

ಸಿರಿಯಾದಲ್ಲಿ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಜನರಲ್ ಮೊಹಮ್ಮದ್ ರೆಜಾ ಜಹೇದಿ ಹತ್ಯೆಯಾಗಿದ್ದಾರೆ. ಅವರು 2016 ರವರೆಗೆ ಲೆಬನಾನ್ ಮತ್ತು ಸಿರಿಯಾದಲ್ಲಿ ಗಣ್ಯ ಕುಡ್ಸ್ ಫೋರ್ಸ್ ಅನ್ನು ಮುನ್ನಡೆಸಿದ್ದರು. ಅವರ ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಕೂಡ ಸಾವನ್ನಪ್ಪಿದ್ದಾರೆ.

ದಾಳಿಯಲ್ಲಿ ಇರಾನ್‌ನ ಒಟ್ಟು 5 ಸೇನಾ ಅಧಿಕಾರಿಗಳು ಪ್ರಾಣ ಕಳೆದುಕೊಂಡಿದ್ದಾರೆ.

ಸೇನಾ ಅಧಿಕಾರಿಗಳ ಹೊರತಾಗಿ, ಹುಸೇನ್ ಯೂಸೆಫ್ ಎಂದು ಗುರುತಿಸಲಾದ ಹಿಜ್ಬುಲ್ಲಾದ ಸದಸ್ಯ ಕೂಡ ವೈಮಾನಿಕ ದಾಳಿಯಲ್ಲಿ ಅಸುನೀಗಿದ್ದಾರೆ.

ಇನ್ನೂ ಹೆಚ್ಚಿನವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಶವಗಳಿಗಾಗಿ ಶೋಧ ನಡೆಯುತ್ತಿದೆ. ಅವಶೇಷಗಳನ್ನು ತೆರವುಗೊಳಿಸಿದ ನಂತರ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

ದಾಳಿಯಲ್ಲಿ ಕಾನ್ಸುಲೇಟ್‌ನ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article