
ದಾವಣೆಗೆರೆ ಚಿನ್ನಕಟ್ಟೆ-ಶಿವಪುರ ಬಳಿ ಓಮಿನಿಗೆ ಡಿಕ್ಕಿ ಹೊಡೆದ ಕೆಎಸ್ಆರ್ಟಿಸಿ ಬಸ್: ಮೂವರು ಸ್ಥಳದಲ್ಲೇ ಸಾವು
Thursday, April 11, 2024
ದಾವಣೆಗೆರೆ: ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಓಮಿನಿ ವ್ಯಾನ್ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಘಟನೆ ನಡೆದಿದೆ.
ಮೃತರನ್ನು ಸೂರಗೊಂಡನಕೊಪ್ಪ ನಿವಾಸಿಗಳಾದ 30 ವರ್ಷದ ರಾಕೇಶ್, 27 ವರ್ಷದ ದೇವರಾಜ್ ಹಾಗೂ ಹರಮಘಟ್ಟ ಗ್ರಾಮದ ನಿವಾಸಿ 83 ವರ್ಷದ ನಂಜುಂಡಪ್ಪ ಎಂದು ತಿಳಿದುಬಂದಿದೆ.
ಭೀಕರ ಅಪಘಾತದಲ್ಲಿ ಓಮಿನಿಯಲ್ಲಿದ್ದ ಆರಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಈ ಪೈಕಿ ತೀವ್ರವಾಗಿ ಗಾಯಗೊಂಡಿರುವ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.