ಲೋಕಸಭಾ ಚುನಾವಣೆಯ ಪ್ರಯುಕ್ತ ಗುರುಪುರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ; ಇನಾಯತ್ ಅಲಿ ಭಾಗಿ
Sunday, April 14, 2024
ಲೋಕಸಭಾ ಚುನಾವಣೆಯ ಪ್ರಯುಕ್ತ ಗುರುಪುರ ಬ್ಲಾಕ್ ವ್ಯಾಪ್ತಿಯ ವಲಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ರವಿವಾರ ಅಡ್ಯಾರ್ ವಲಯ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆಯೊಂದಿಗೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಭಾಗವಹಿಸಿ ಮಾತನಾಡಿ ಈ ಬಾರಿ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಗೆಲುವಿಗೆ ನಾವೆಲ್ಲಾ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.