ತೆಲಂಗಾಣದಲ್ಲಿ ಮುಸ್ಲಿಂರ ಮೀಸಲಾತಿಯನ್ನು ಬಿಜೆಪಿ ಅಂತ್ಯಗೊಳಿಸಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ತೆಲಂಗಾಣದಲ್ಲಿ ಮುಸ್ಲಿಂರ ಮೀಸಲಾತಿಯನ್ನು ಬಿಜೆಪಿ ಅಂತ್ಯಗೊಳಿಸಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಸಿದ್ಧಿಪೇಟೆ: ತೆಲಂಗಾಣದಲ್ಲಿ ಮುಸ್ಲಿಂರ ಮೀಸಲಾತಿಯನ್ನು ಬಿಜೆಪಿ ಅಂತ್ಯಗೊಳಿಸಲಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಲಾಭ ಮಾಡಿಕೊಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.

ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಟಿಆರ್ ಎಸ್ ಸರ್ಕಾರ ಜಾರಿಗೆ ತಂದಿದ್ದ ಮುಸ್ಲಿಂರ ಮೀಸಲಾತಿಯನ್ನು ಅಂತ್ಯಗೊಳಿಸಿ, ಎಸ್ ಸಿ, ಎಸ್ ಟಿ ಮತ್ತು ಒಬಿಸಿಗಳಿಗೆ ಮೀಸಲಾತಿ ಒದಗಿಸಲು ಬಿಜೆಪಿ ನಿರ್ಧರಿಸಿದೆ ಎಂದರು.

ಮುಸ್ಲಿಂರಿಗೆ ಉದ್ಯೋಗ ಮತ್ತು ಮೀಸಲಾತಿಯಲ್ಲಿ ಶೇ. 4 ರಷ್ಟು ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ರಕ್ಷಿಸಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಕಳೆದ ವಾರ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ತೆಲಂಗಾಣವನ್ನು ದೆಹಲಿಯ ಎಟಿಎಂ ಮಾಡಿಕೊಂಡಿದೆ ಎಂದು ಅಮಿತ್ ಶಾ ಆರೋಪಿಸಿದರು.

ಬಿಜೆಪಿ ನೇತೃತ್ವದ ಸರ್ಕಾರ ದೇಶದಲ್ಲಿ ಬಾಕಿ ಉಳಿದಿರುವ ಸಮಸ್ಯೆಗಳನ್ನು ಹೋಗಲಾಡಿಸುವ ಕೆಲಸ ಮಾಡಿದೆ. ಮೋದಿ ಸರ್ಕಾರದ ಅವಧಿಯಲ್ಲಿ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು ಮತ್ತು ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ರದ್ದುಗೊಳಿಸಲಾಯಿತು ಎಂದು ಅವರು ಹೇಳಿದರು.

ಹಿಂದಿನ ಬಿಆರ್ ಎಸ್ ಸರ್ಕಾರ ಮಾಡಿದ ಹಗರಣಗಳ ಬಗ್ಗೆ ಕಾಂಗ್ರೆಸ್ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಅಮಿತ್ ಶಾ, ಟಿಆರ್‌ಎಸ್ ಮತ್ತು ಕಾಂಗ್ರೆಸ್ ಎರಡೂ ಒಟ್ಟಿಗೆ ಇವೆ. ತೆಲಂಗಾಣವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಲು ಮೋದಿಜಿ ಕೆಲಸ ಮಾಡುತ್ತಾರೆ. ಕಾಂಗ್ರೆಸ್ ಮತ್ತು ಟಿಆರ್‌ಎಸ್ ಎರಡೂ ಮಜ್ಲಿಸ್ (ಎಐಎಂಐಎಂ) ಗೆ ಹೆದರಿ ತೆಲಂಗಾಣ ವಿಮೋಚನಾ ದಿನವನ್ನು ಆಚರಿಸಲ್ಲ. ಬಿಜೆಪಿ ನೇತೃತ್ವದ ಸರ್ಕಾರವು ಸೆಪ್ಟೆಂಬರ್ 17 ಅನ್ನು ತೆಲಂಗಾಣ ವಿಮೋಚನಾ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ. ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದ ಜನರು ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಿರ್ಧರಿಸಿದ್ದಾರೆ ಎಂದರು.

Ads on article

Advertise in articles 1

advertising articles 2

Advertise under the article