ಸರಳ ಸಜ್ಜನಿಕೇಯ ರಾಜಕಾರಣಿ ಕೊಟಾರನ್ನು ದಾಖಲೆಗಳ ಮತಗಳ ಅಂತರದಲ್ಲಿ ಗೆಲ್ಲಿಸಿ: ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾ ಸಮಾವೇಶದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಸರಳ ಸಜ್ಜನಿಕೇಯ ರಾಜಕಾರಣಿ ಕೊಟಾರನ್ನು ದಾಖಲೆಗಳ ಮತಗಳ ಅಂತರದಲ್ಲಿ ಗೆಲ್ಲಿಸಿ: ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾ ಸಮಾವೇಶದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ: ಜಿಲ್ಲಾ ಭಾರತೀಯ ಜನತಾ ಪಾರ್ಟಿ ಹಾಗು ಎಸ್.ಸಿ ಮೋರ್ಚಾ ಉಡುಪಿ ಜಿಲ್ಲೆ ಇದರ ವತಿಯಿಂದ ಶುಕ್ರವಾರದಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ "ಎಸ್.ಸಿ ಮೋರ್ಚಾ ಸಮಾವೇಶ"ದಲ್ಲಿ  ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಮಾತನಾಡಿದರು.




ನರೇಂದ್ರ ಮೋದಿ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ವಿಚಾರಧಾರೆಯಂತೆ ಕೈಗಾರಿಕರಣ ಮತ್ತು ನಗರೀಕರಣದ ಮೂಲಕ ಸ್ವಉದ್ಯೋಗ ಸೃಷ್ಟಿಸಿ ಆತ್ಮ ನಿರ್ಭರ ಭಾರತಕ್ಕಾಗಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದ ಗುರ್ಮೆ ಅವರು, ಕೋಟ ಶ್ರೀನಿವಾಸ ಪೂಜಾರಿ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಅವರ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಅನುದಾನವನ್ನು ನೀಡಿದ್ದು ಇಂತಹ ಒಬ್ಬ ಸರಳ ಸಜ್ಜನಿಕೇಯ ರಾಜಕಾರಣಿಯನ್ನು ದಾಖಲೆಗಳ ಮತಗಳ ಅಂತರದಲ್ಲಿ ಗೆಲ್ಲಿಸಲು ನಾವೆಲ್ಲರೂ ಶ್ರಮಿಸಬೇಕು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಎಸ್. ಸಿ ಮೋರ್ಚಾ ಅಧ್ಯಕ್ಷರು, ಶಾಸಕರಾದ ಸಿಮೆಂಟ್ ಮಂಜು, ಉಪಾಧ್ಯಕ್ಷರಾದ ದಿನಕರ್ ಬಾಬು, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಹೆರ್ಗ ದಿನಕರ್ ಶೆಟ್ಟಿ, ಜಿಲ್ಲಾ ಬಿಜೆಪಿ ಎಸ್.ಟಿ ಮೋರ್ಚಾದ ಅಧ್ಯಕ್ಷರಾದ ಚಂದ್ರ ಪಂಚವಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article