ಇನಾಯತ್ ಅಲಿ ನೇತೃತ್ವದಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ
Tuesday, April 16, 2024
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಪ್ರಚಾರ ಸಭೆ ಹಾಗೂ ಮತಯಾಚನೆ ನಡೆಸಿದರು.
ವಿವಿಧ ಧಾರ್ಮಿಕ ಸ್ಥಳಗಳಿಗೆ ಹಾಗು ಸಭೆ, ಸಮಾರಂಭಗಳಿಗೆ ಭೇಟಿ ನೀಡಿ ಪದ್ಮರಾಜ್ ರಾಮಯ್ಯ ಅವರನ್ನು ಈ ಬಾರಿಯ ಚುನಾವಣೆಯಲ್ಲಿ ಅತ್ಯಧಿಕ ಮತ ನೀಡಿ ವಿಜಯಶಾಲಿಯನ್ನಾಗಿ ಮಾಡುವಂತೆ ಮನವಿ ಮಾಡಲಾಯಿತು.