ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಬಂಧ ರವಿವಾರದಂದು "ಮಹಾ ಸಂಪರ್ಕ ಅಭಿಯಾನ" ನಡೆಯುತ್ತಿದ್ದು ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕುತ್ಯಾರು ಶಕ್ತಿ ಕೇಂದ್ರದ ಬೂತ್ ಸಂಖ್ಯೆ 157 ರ ವ್ಯಾಪ್ತಿಯ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದರು.
ಬಳಿಕ ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದವರೊಂದಿಗೆ ಶಾಸಕ ಗುರ್ಮೆ ಸುರೇಶ್ ಅವರಿಂದ ಕಟಪಾಡಿ ಸಂತೆ ಮಾರುಕಟ್ಟೆಯಲ್ಲಿ ನಡೆಯಿತು.









