ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಇಬ್ಬರು ಶಂಕಿತರನ್ನು ಬಂಧಿಸಿದ NIA ಅಧಿಕಾರಿಗಳು

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಇಬ್ಬರು ಶಂಕಿತರನ್ನು ಬಂಧಿಸಿದ NIA ಅಧಿಕಾರಿಗಳು

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(NIA)ದ ಅಧಿಕಾರಿಗಳು ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಶಂಕಿತ ಮುಸಾವಿರ್ ಹುಸೇನ್ ಶಾಜಿಬ್ ಹಾಗು ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ಬಂಧಿಸಲಾಗಿದೆ ಎಂದು ಎನ್ಎಐ ಮೂಲಗಳು ತಿಳಿಸಿವೆ. 'ಸಾಕ್ಷಿ ಸಂಗ್ರಹಕ್ಕಾಗಿ ಆರೋಪಿಗಳ ಸಹಪಾಠಿಗಳು, ಸ್ನೇಹಿತರು, ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ.

ಐಇಡಿ ತಂದಿದ್ದ ಮುಸಾವೀರ್ ಹಾಗೂ ಸ್ಫೋಟಕ್ಕೆ ರೂಪುರೇಷೆ ಸಿದ್ಧಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ತೀರ್ಥಹಳ್ಳಿಯವರು ಎಂದು ಹೇಳಲಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಇವರಿಗೆ ಸಹಾಯ ಮಾಡಿದ್ದ ಮುಜಾಮೀಲ್ ಷರೀಫ್ ಎಂಬಾತನನ್ನು ಕೂಡ ಬಂಧಿಸಲಾಗಿದೆ ಎಂದು ಎನ್ಐಎ ಮೂಲಗಳು ತಿಳಿಸಿವೆ.

ಇನ್ನು ಬಂಧನ ತಪ್ಪಿಸಿಕೊಳ್ಳಲು ಇಬ್ಬರೂ ಶಂಕಿತ ಉಗ್ರರು ಅಸ್ಸಾಂ ಮತ್ತು ಬಂಗಾಳದಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದರು ಎಂದು ಹೇಳಲಾಗಿದೆ. ಆದರೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದ ಎನ್ಐಎ ತಂಡ ಇದೀಗ ಇಬ್ಬರೂ ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Ads on article

Advertise in articles 1

advertising articles 2

Advertise under the article