ವಶ ಪಡಿಸಿಕೊಂಡ ಬಿಜೆಪಿಗೆ ಸೇರಿದ 2 ಕೋಟಿ ರೂ. ಬಿಡುಗಡೆ; ಇದು ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್ ಸ್ಟ್ರೈಕ್; ತನಿಖೆಗೆ ಸಚಿವ ಕೃಷ್ಣ ಬೈರೇಗೌಡ ಒತ್ತಾಯ

ವಶ ಪಡಿಸಿಕೊಂಡ ಬಿಜೆಪಿಗೆ ಸೇರಿದ 2 ಕೋಟಿ ರೂ. ಬಿಡುಗಡೆ; ಇದು ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್ ಸ್ಟ್ರೈಕ್; ತನಿಖೆಗೆ ಸಚಿವ ಕೃಷ್ಣ ಬೈರೇಗೌಡ ಒತ್ತಾಯ

 

ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ದಾಳಿ ವೇಳೆ ವಶಪಡಿಸಿಕೊಂಡ ಬಿಜೆಪಿಗೆ ಸೇರಿದ 2 ಕೋಟಿ ರೂಪಾಯಿ ನಗದು ಬಿಡುಗಡೆ ಮಾಡಿದ ಆದಾಯ ತೆರಿಗೆ ಇಲಾಖೆ ಅಧಿಕಾರಿ ವಿರುದ್ಧ ಕಂದಾಯ ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದ್ದಾರೆ.

ಈ ಘಟನೆಯ ಬಗ್ಗೆ ಭಾರತ ಚುನಾವಣಾ ಆಯೋಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಶರವೇಗದಲ್ಲಿ ನಿರ್ಧಾರವನ್ನು ತೆಗೆದುಕೊಂಡು ನಗದು ಬಿಡುಗಡೆ ಮಾಡಲು ಆದೇಶವನ್ನು ಹೊರಡಿಸಿದ ಮೊದಲ ಪ್ರಕರಣ ಇದಾಗಿದೆ. ಇದು ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್ ಸ್ಟ್ರೈಕ್’ ಎಂದು ಪತ್ರಿಕಾಗೋಷ್ಠಿಯಲ್ಲಿ ಸಚಿವ ಕೃಷ್ಣ ಭೈರೇಗೌಡ ಹರಿಹಾಯ್ದಿದ್ದಾರೆ.

ಈ ಮಧ್ಯೆ, ಬೆಂಗಳೂರು ನಗರ ಜಿಲ್ಲೆಯ ಮಾದರಿ ನೀತಿ ಸಂಹಿತೆ(MCC) ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರು ವಶಪಡಿಸಿಕೊಂಡ ಹಣವನ್ನು ಬಿಡುಗಡೆ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ, ಆದರೆ ಈ ಸಂಬಂಧ ನಿನ್ನೆ ಭಾನುವಾರ ಎಫ್‌ಐಆರ್ ದಾಖಲಿಸಲಾಗಿದೆ. ನಗದನ್ನು ಕರ್ನಾಟಕ ಪೊಲೀಸರು ವಶಪಡಿಸಿಕೊಂಡಿದ್ದು, ಪ್ರಕರಣವು ತನಿಖೆಯ ಹಂತದಲ್ಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಐಟಿ ಉಲ್ಲಂಘನೆ ಹಿನ್ನೆಲೆಯಲ್ಲಿ ಹಣವನ್ನು ವಶಪಡಿಸಿಕೊಳ್ಳಲು ಆದಾಯ ತೆರಿಗೆ ಅಧಿಕಾರಿಗಳು ಆಧಾರವನ್ನು ಕಂಡುಕೊಂಡಿಲ್ಲ ಎಂದು ಅದು ಹೇಳಿದೆ.

ಮೊನ್ನೆ ಶನಿವಾರ ಮಧ್ಯಾಹ್ನ ಕಾಟನ್‌ಪೇಟೆಯಲ್ಲಿ ಬಿಜೆಪಿ ನಾಯಕರು ಅಕ್ರಮವಾಗಿ ಸಾಗಿಸುತ್ತಿದ್ದ 2 ಕೋಟಿ ರೂಪಾಯಿ ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದರು. ಈ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ. ಆದರೆ, ಐಟಿ ಅಧಿಕಾರಿಗಳು ಕ್ಲೀನ್ ಚಿಟ್ ನೀಡಿ ಕೇವಲ ನಾಲ್ಕು ಗಂಟೆಗಳಲ್ಲಿ ಬಿಜೆಪಿಗೆ ಹಣ ಹಿಂದಿರುಗಿಸುವಂತೆ ಆದೇಶ ಹೊರಡಿಸಿದ್ದಾರೆ. ಇದು ಹೇಗೆ ಸಾಧ್ಯವಾಯಿತು?” ಎಂದು ಸಚಿವ ಕೃಷ್ಣ ಭೈರೇಗೌಡ ಅವರ ಪ್ರಶ್ನೆಯಾಗಿದೆ.

ಬಿಜೆಪಿ ನಾಯಕರು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ವ್ಯವಸ್ಥೆಗೆ ಅವಮಾನ ಮಾಡುವ ರೀತಿಯಲ್ಲಿ ಚುನಾವಣೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ಮಾರ್ಚ್ 27ರಂದು ಕೆನರಾ ಬ್ಯಾಂಕ್‌ನಿಂದ 5 ಕೋಟಿ ರೂಪಾಯಿ ಡ್ರಾ ಮಾಡಿ ಇಟ್ಟುಕೊಂಡಿರುವುದಾಗಿ ಬಿಜೆಪಿ ಕೆಲವು ದಾಖಲೆಗಳೊಂದಿಗೆ ಹೇಳಿಕೊಂಡಿದ್ದು, ಆ ಹಣವನ್ನು ಮೈಸೂರು, ಚಾಮರಾಜನಗರ ಮತ್ತು ಮಂಗಳೂರಿಗೆ ತನ್ನ ಅಭ್ಯರ್ಥಿಗಳ ಚುನಾವಣಾ ವೆಚ್ಚವಾಗಿ ಕಳುಹಿಸಲಾಗುತ್ತಿದೆ ಎಂದು ಕೃಷ್ಣ ಭೈರೇಗೌಡ ಹೇಳಿದ್ದಾರೆ.

ಚಾಮರಾಜನಗರದ ಬಿಜೆಪಿ ಅಭ್ಯರ್ಥಿ ಈಗಾಗಲೇ ಚುನಾವಣಾ ಆಯೋಗಕ್ಕೆ 57 ಲಕ್ಷ, ಮೈಸೂರಿನಲ್ಲಿ 70 ಲಕ್ಷ, ಮಂಗಳೂರಿನಲ್ಲಿ 50 ಲಕ್ಷ ಖರ್ಚು ಮಾಡಿದ್ದಾರೆ ಎಂದು ಲೆಕ್ಕ ಹಾಕಿದ್ದಾರೆ. ಈಗ 2 ಕೋಟಿ ಸೇರಿಸಿದರೆ ಪ್ರತಿ ಅಭ್ಯರ್ಥಿಗೆ 95 ಲಕ್ಷ ರೂಪಾಯಿ ಚುನಾವಣಾ ವೆಚ್ಚದ ಮಿತಿ ಮೀರುವುದಿಲ್ಲವೇ? ಐಟಿ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ವಶಪಡಿಸಿಕೊಂಡ ಹಣವನ್ನು ವಾಪಸ್ ಪಡೆಯಲು ಬಿಜೆಪಿ ನೀಡಿರುವ ದಾಖಲೆಗಳ ಸತ್ಯಾಸತ್ಯತೆಯನ್ನೂ ಅವರು ಪ್ರಶ್ನಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಬಿಜೆಪಿ ಚುನಾವಣೆಗೆ ಒಂದು ರೂಪಾಯಿ ಖರ್ಚು ಮಾಡಿಲ್ಲವೇ? ನಾವು ಕೂಡ ಈ ರೀತಿ ವಹಿವಾಟು ನಡೆಸಿದರೆ, ನೀವು ನಮ್ಮ ಎಲ್ಲಾ ವಹಿವಾಟುಗಳನ್ನು ಮನ್ನಾ ಮಾಡುತ್ತೀರಾ ಎಂದು ಕೇಳಿದ್ದಾರೆ. ಡಿಜಿಟಲ್ ವರ್ಗಾವಣೆ ಸಾಧ್ಯವಾದಾಗ ಹಣದ ಭೌತಿಕ ವಹಿವಾಟಿನ ಬಗ್ಗೆಯೂ ಪ್ರಸ್ತಾಪಿಸಿದ ಅವರು, 50,000 ರೂಪಾಯಿಗಿಂತ ಹೆಚ್ಚಿನ ವಿತ್ತೀಯ ವ್ಯವಹಾರವನ್ನು ಬ್ಯಾಂಕ್ ಖಾತೆ ಅಥವಾ ಚೆಕ್ ಮೂಲಕ ಮಾಡಬೇಕು ಎಂಬ ಕಾನೂನು ಇದೆ ಎಂದು ತಿಳಿಸಿದರು.

ಚುನಾವಣಾ ಸಂದರ್ಭದಲ್ಲಿ 20,000 ರೂಪಾಯಿಗಿಂತ ಹೆಚ್ಚಿನ ವಹಿವಾಟುಗಳನ್ನು ಚೆಕ್ ಮೂಲಕ ನಡೆಸಬೇಕು ಎಂದು ಮಾದರಿ ನೀತಿ ಸಂಹಿತೆ ಹೇಳುತ್ತದೆ. ಅಧಿಕಾರಿಗಳು ಕಾನೂನಿಗೆ ಗಮನ ಕೊಡದಿರುವುದು ದುರದೃಷ್ಟಕರ. ಕಾನೂನು ಉಲ್ಲಂಘಿಸಿ ಅಥವಾ ಪೂರ್ವ ಮಾಹಿತಿ ಇಲ್ಲದೆ 2 ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡುವುದು ಅಕ್ರಮ ಹಣ ವರ್ಗಾವಣೆ ಅಲ್ಲವೇ ಅಥವಾ ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗಳ ನೆರವಿನೊಂದಿಗೆ ಹೊಸ ಹಣ ವರ್ಗಾವಣೆ ದಂಧೆ ನಡೆಸುತ್ತಿದ್ದಾರೆಯೇ ಎಂದು ಪತ್ರಿಕಾಗೋಷ್ಠಿಯಲ್ಲಿ ಕೃಷ್ಣ ಭೈರೇಗೌಡ ಪ್ರಶ್ನಿಸಿದ್ದಾರೆ.

Ads on article

Advertise in articles 1

advertising articles 2

Advertise under the article