ರಾಜ್ಯಕ್ಕೆ ನೀಡಬೇಕಿದ್ದ ರೂ.18,171 ಕೋಟಿ ಬರ ಪರಿಹಾರದಲ್ಲಿ ಕೇಂದ್ರ ಸರ್ಕಾರ ಕೊಟ್ಟಿದ್ದು 3,454 ರೂ; ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯಕ್ಕೆ ನೀಡಬೇಕಿದ್ದ ರೂ.18,171 ಕೋಟಿ ಬರ ಪರಿಹಾರದಲ್ಲಿ ಕೇಂದ್ರ ಸರ್ಕಾರ ಕೊಟ್ಟಿದ್ದು 3,454 ರೂ; ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕೇಂದ್ರ ಸರ್ಕಾರದಿಂದ ಬಿಡುಗಡೆಗೊಂಡಿರುವ ಬರ ಪರಿಹಾರ ಮೊತ್ತ ಬಹಳ ಕಡಿಮೆಯಾಗಿದೆ. ನಾವು ಕೇಳಿದ್ದು 18,172 ಕೋಟಿ ರೂಪಾಯಿ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿನಲ್ಲಿಯೇ ಕೇಳಿದ್ದೆವು. ಕೇಂದ್ರ ಸರ್ಕಾರ ಕೇವಲ ರೂ. 3498.98 ಕೋಟಿ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ನಮ್ಮಲ್ಲಿನ ಬರಸ್ಥಿತಿಯನ್ನು ಮನವರಿಕೆ ಮಾಡಿ ಕೊಟ್ಟಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗೆ ರಾಜಕೀಯ ದುರುದ್ದೇಶದಿಂದ ಕೇಂದ್ರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯ ವಿಚಾರಣೆ ವೇಳೆ ಚಾಟಿ ಬೀಸಿದ ನಂತರ ವಾರದ ಅವಧಿಯೊಳಗೆ ಬರ ಪರಿಹಾರ ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್ ಗೆ  ವಚನ ನೀಡಿತ್ತು. ಅದನ್ನು ಪಾಲಿಸಲಿಕ್ಕಾಗಿ ಒಲ್ಲದ ಮನಸ್ಸಿನಿಂದ ಈ ಪರಿಹಾರ ನೀಡಿದೆ ಎಂದರು.

ಇದರಲ್ಲಿ BJP Karnataka ನಾಯಕರದ್ದಾಗಲಿ, ಕೇಂದ್ರ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ.  ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್  ಇಟ್ಟುಕೊಂಡಿರುವ ಕಾಳಜಿಯ ಫಲ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ರೊಚ್ಚೆದ್ದಿರುವ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನೆ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡುತ್ತೇನೆ. 

ಈ ಬರ ಪರಿಹಾರ ಬಿಡುಗಡೆಯ ಹಿಂದಿನ ಕಾರಣಗಳೇನೇ ಇರಲಿ, ನೀಡಿರುವ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಾಧ್ಯವಾದಷ್ಟು ಶೀಘ್ರ ಬಾಕಿ ಪರಿಹಾರದ ಹಣವನ್ನು ಬಿಡುಗಡೆಗೊಳಿಸಬೇಕೆಂದು ಪ್ರಧಾನಮಂತ್ರಿ Narendra Modi ಅವರನ್ನು ಒತ್ತಾಯಿಸುತ್ತಿದ್ದೇನೆ. ಇದೇ ರೀತಿ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯವನ್ನು ಕೂಡಾ ಕೇಂದ್ರ ಸರ್ಕಾರ ಸರಿಪಡಿಸಬೇಕೆಂದು ಆಗ್ರಹಿಸುತ್ತೇನೆ.

ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ನಾವು 13-9-2023ರಂದು ಘೋಷಿಸಿದ್ದೆವು. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ 35,162 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ. ಕೇಂದ್ರ ಸರ್ಕಾರದಿಂದ ನಾವು ಪರಿಹಾರ ಕೇಳಿರುವುದು ಹೆಚ್ಚು ಕಡಿಮೆ ಅದರ ಅರ್ಧದಷ್ಟು ಅಂದರೆ ರೂ.18,171 ಕೋಟಿ. ಉಳಿದ ಹಣವನ್ನು ರಾಜ್ಯ ಸರ್ಕಾರ ತನ್ನ ಸಂಪನ್ಮೂಲದಿಂದಲೆ ಭರಿಸುತ್ತಿದೆ. ಈಗ ಬಿಡುಗಡೆಯಾಗಿರುವುದು ರೂ.3,454 ಕೋಟಿ ಮಾತ್ರ. ಉಳಿದ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

Ads on article

Advertise in articles 1

advertising articles 2

Advertise under the article