ಉದ್ಯಾವರ : ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಸಹಿತ ಹಲವರು ಕಾಂಗ್ರೆಸ್ ಸೇರ್ಪಡೆ
ಉದ್ಯಾವರ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಉದ್ಯಾವರದಲ್ಲಿ ನಡೆದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಸಹಿತ ಮೂವರು ಕಾಂಗ್ರೆಸ್ ಸೇರ್ಪಡೆಗೊoಡರು.
ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಫ್ರೀಡಾ ಡಿಸೋಜಾ ಸಹಿತ ಐವನ್ ಡಿಸೋಜಾ, ರಿಚರ್ಡ್ ಡಿಸೋಜಾ ರವರನ್ನು ಕಾಪು ಬ್ಲಾಕ್ ಕಾಂಗ್ರೆಸ್ ಉತ್ತರ ವಲಯ ಅಧ್ಯಕ್ಷ ಸಂತೋಷ್ ಕುಲಾಲ್, ಕಾರ್ಯಾಧ್ಯಕ್ಷ ಚರಣ್ ವಿಠ್ಠಲ್ ಪಕ್ಷದ ಶಾಲು ಹೊಂದಿಸಿ ಸೇರ್ಪಡೆಗೊಳಿಸಿದರು. ಈ ಸಂದರ್ಭದಲ್ಲಿ ಸೋಶಿಯಲ್ ಮಾಧ್ಯಮ ಉಸ್ತುವಾರಿ ನವೀನ್ ಶೆಟ್ಟಿ, ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೋಯ್ಸ್ ಫೆರ್ನಾಂಡಿಸ್, ಮುಖಂಡರಾದ ನಾಗೇಶ್ ಕುಮಾರ್ ಉದ್ಯಾವರ, ಶೇಖರ್ ಕೋಟ್ಯಾನ್, ಗಿರೀಶ್ ಕುಮಾರ್, ಹೆಲನ್ ಫೆರ್ನಾಂಡಿಸ್, ಗ್ರಾಮ ಪಂಚಾಯತ್ ಸದಸ್ಯರಾದ ಲಾರೆನ್ಸ್ ಡೆಸಾ, ನಿತಿನ್ ಸಾಲ್ಯಾನ್, ದಿವಾಕರ ಬೊಳ್ಜೆ, ಮಧುಲತಾ, ಆಶಾ ಸುರೇಶ್, ಆಶಾ ವಾಸು, ಪೂರ್ಣಿಮಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.