ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ ಸಾಕಷ್ಟು ನೋವುಂಟು ಮಾಡಿದೆ. ಹಲವು ದಿಗ್ಗಜರ ಜೊತೆ ಅವರು ನಟಿಸಿ ಫೇಮಸ್ ಆಗಿದ್ದರು.

ದ್ವಾರಕೀಶ್ ಅವರ ನಿಧನವಾರ್ತೆ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ಅವರು ಮೃತಪಟ್ಟ ಬಗ್ಗೆ ಈ ಮೊದಲು ಹಲವು ಬಾರಿ ವದಂತಿ ಹಬ್ಬಿತ್ತು. ಈ ಬಾರಿಯೂ ಸಾವಿನ ಸುದ್ದಿ ಫೇಕ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಈಗ ಅವರ ಕುಟುಂಬದ ಕಡೆಯಿಂದಲೇ ಇದಕ್ಕೆ ಸ್ಪಷ್ಟನೆ ನೀಡಲಾಗಿದೆ.

‘ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ’ ಎಂದು ದ್ವಾರಕೀಶ್ ಪುತ್ರ ಯೋಗಿ ಅವರು ಮಾಹಿತಿ ನೀಡಿದ್ದಾರೆ.

ದ್ವಾರಕೀಶ್ ಅವರು ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ನಿರ್ಮಾಪಕನಾಗಿ, ನಿರ್ದೇಶಕನಾಗಿ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು.  ‘ಮಮತೆಯ ಬಂಧನ’ ಅವರ ನಿರ್ಮಾಣದ ಮೊದಲ ಸಿನಿಮಾ. ‘ವೀರ ಸಂಕಲ್ಪ’ ಅವರ ನಟನೆಯ ಮೊದಲ ಸಿನಿಮಾ.

ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ದ್ವಾರಕೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ.

ಏಪ್ರಿಲ್ 17 ರಂದು ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ದ್ವಾರಕೀಶ್ ಅವರ ಆಪ್ತರು, ಅಭಿಮಾನಿಗಳು, ಬೆಂಬಲಿಗರು ರವೀಂದ್ರ ಕಲಾಕ್ಷೇತ್ರಕ್ಕೆ ಬಂದು ಅಂತಿಮ ನಮನ ಸಲ್ಲಿಸಬಹುದು.

1942, ಆಗಸ್ಟ್ 19 ರಂದು ಹುಣಸೂರು ನಲ್ಲಿ ಶಮಾರಾವ್ ಮತ್ತು ಜಯಮ್ಮರವರಿಗೆ ಜನಿಸಿದ ದ್ವಾರಕೀಶ್ ಅವರು, ನಟ, ನಿರ್ದೇಶಕ ಮತ್ತು ನಿರ್ಮಾಪಕ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರಾಗಿದ್ದರು.

ಮೈಸೂರಿನ ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ CPC ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು, ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು. 1963ರಲ್ಲಿ ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು.

ನಟ ದ್ವಾರಕೀಶ್‌ ಅವರು ಕನ್ನಡ ಚಿತ್ರರಂಗದಲ್ಲಿ ಬಹುದೊಡ್ಡ ಹೆಸರು ಮಾಡಿದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅವರನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್‌ ನೀಡಿದೆ.

ನಟರಾಗಿ, ನಿರ್ದೇಶಕ, ನಿರ್ಮಾಪಕರಾಗಿ ಹಲವಾರು ಚಿತ್ರಗಳ ಕೊಡುಗೆ ನೀಡಿರುವ ಅವರು ಕನ್ನಡ ಚಿತ್ರರಂಗಕ್ಕೆ ಕಲಾಸೇವೆ ಸಲ್ಲಿಸಿದ್ದಾರೆ. ಡಾ. ವಿಷ್ಣುವರ್ಧನ್‌, ಡಾ. ರಾಜ್‌ಕುಮಾರ್‌ ಹಾಗೂ ಅಂಬರೀಶ್‌ರಂತಹ ಮೇರು ನಟರೊಂದಿಗೆ ಹಿರಿಯ ತೆರೆಯಲ್ಲಿ ಮಿಂಚಿರುವ ನಟ ದ್ವಾರಕೀಶ್‌ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. 40ಕ್ಕೂ ಹೆಚ್ಚು ಸಿನಿಮಾಗಳ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಅವರು ಕನ್ನಡ ಜನತೆಗೆ ಜನಪ್ರಿಯ ರಾಜಕುಳ್ಳ ಎಂದೇ ಜನಪ್ರಿಯರು.


Ads on article

Advertise in articles 1

advertising articles 2

Advertise under the article