ಕಾರ್ಕಳದಲ್ಲಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ; ಗುರ್ಮೆ ಸುರೇಶ್ ಶೆಟ್ಟಿ, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಹಲವು ನಾಯಕರು ಭಾಗಿ
Friday, April 5, 2024
ಕಾರ್ಕಳ: ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಇದರ ವತಿಯಿಂದ ಶುಕ್ರವಾರದಂದು ಕಾರ್ಕಳ ಬಿ. ಮಂಜುನಾಥ ಪೈ ಸಭಾಂಗಣದಲ್ಲಿ ಆಯೋಜಿಸಲಾದ "ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ"ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.