ಭಾರತ ವಿಶ್ವ ಗುರುವಾಗಬೇಕಾದರೆ ಮೋದಿಯನ್ನು ಬೆಂಬಲಿಸಿ, ಕೋಟಾರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ: ಚೇರ್ಕಾಡಿ-ಕೆಂಜೂರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಭಾರತ ವಿಶ್ವ ಗುರುವಾಗಬೇಕಾದರೆ ಮೋದಿಯನ್ನು ಬೆಂಬಲಿಸಿ, ಕೋಟಾರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ: ಚೇರ್ಕಾಡಿ-ಕೆಂಜೂರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ ವಿಧಾನಸಭಾ ಕ್ಷೇತ್ರದ ಚೇರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಇಂದು ದಿನಾಂಕ 11-04-2024 ರಂದು ಸುಧಾಕರ್ ಶೆಟ್ಟಿ ಸಭಾಂಗಣದಲ್ಲಿ ನಡೆಯಿತು.


ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಮಾತನಾಡಿ ಭಾರತ ವಿಶ್ವ ಗುರುವಾಗಬೇಕಾದರೆ ಸನ್ಮಾನ ಶ್ರೀ ನರೇಂದ್ರ ಮೋದಿ ಅವರು ಮಗದೊಮ್ಮೆ ಪ್ರಧಾನಿಯಾಗಬೇಕು. ಇದಕ್ಕಾಗಿ ನಾವು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಹೆಚ್ಚಿನ ಮತಗಳಿಂದ ಅಂತರದಿಂದ ಗೆಲ್ಲಿಸಬೇಕು ಎಂದರು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ, ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ರಾಜೀವ ಕುಲಾಲ್ ಹಾಗೂ ಗ್ರಾಮಾಂತರ ಮಂಡಲ ಬಿಜೆಪಿ ಪದಾಧಿಕಾರಿಗಳು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.



ಕೆಂಜೂರು ಬೂತ್ ಮಟ್ಟದ ಕಾರ್ಯಕರ್ತರ ಸಭೆ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಉಡುಪಿ ವಿಧಾನಸಭಾ ಕ್ಷೇತ್ರದ ಕೆಂಜೂರು ಭಾಗದ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಇಂದು ದಿನಾಂಕ 11-04-2024 ರಂದು ಕೆಂಜೂರು ಗರಡಿಜೆಡ್ದಿನಲ್ಲಿ ನಡೆಯಿತು.

ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಮಾತನಾಡಿ 2014 ಸಂದರ್ಭದಲ್ಲಿ ನರೇಂದ್ರ ಮೋದಿಯವರು ಪ್ರಧಾನಿ ಆಗುವಾಗ ಆರ್ಥಿಕತೆಯಲ್ಲಿ 12ನೇ ಸ್ಥಾನದಲ್ಲಿದ್ದ ಭಾರತ ಇಂದು 5 ಸ್ಥಾನದಲ್ಲಿದೆ. ಮಗದೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿಯಾದರೆ ಭಾರತದ ಆರ್ಥಿಕತೆ 3 ಸ್ಥಾನಕ್ಕೆ ಏರುವುದರಲ್ಲಿ ಸಂಶಯವಿಲ್ಲ ಹಾಗಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅತ್ಯಧಿಕ ಮತಗಳಿಂದ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದರು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ, ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ರಾಜೀವ ಕುಲಾಲ್ ಪ್ರಧಾನ ಕಾರ್ಯದರ್ಶಿಗಳಾದ ಮನೋಜ್ ಶೆಟ್ಟಿ, ಸಚಿನ್ ಪೂಜಾರಿ ಹಾಗೂ ಗ್ರಾಮಾಂತರ ಬಿಜೆಪಿ ಪದಾಧಿಕಾರಿಗಳು ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article