ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರವಾಗಿ ಮುದರಂಗಡಿ-ಉದ್ಯಾವರದಲ್ಲಿ ಮತಯಾಚನೆ ಮಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ
Tuesday, April 16, 2024
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಂಗಳವಾರ ಕಾಪು ವಿಧಾನಸಭಾ ಕ್ಷೇತ್ರದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಸ್.ಸಿ ಕಾಲೋನಿಯ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಬಳಿಕ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದರು.