ಪೆರ್ಡೂರು, ಉದ್ಯಾವರ ಬೊಳ್ಜೆ-ಪಿತ್ರೋಡಿ, 80 ಬಡಗಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ-ಚುನಾವಣಾ ಪ್ರಚಾರ ಸಭೆ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ
ಕಾಪು ಮಂಡಲ ಬಿಜೆಪಿ ಇದರ ವತಿಯಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣಾ ಪೂರ್ವಭಾವಿಯಾಗಿ ಇಂದು ದಿನಾಂಕ 13-04-2024 ರಂದು ನಡೆದ ಪೆರ್ಡೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ಚುನಾವಣಾ ಪ್ರಚಾರ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಸಭೆಯಲ್ಲಿ ಶಾಸಕರು ಮಾತನಾಡಿ ಒಬ್ಬ ಸರಳ ಸಜ್ಜನಿಕೇಯ ರಾಜಕಾರಣಿಯಾದ ಕೋಟ ಶ್ರೀನಿವಾಸ ಪೂಜಾರಿ ಅವರು ನಮ್ಮ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಸಚಿವರಾಗಿದ್ದ ಸಂದರ್ಭದಲ್ಲಿ ಅವರು ಕಾಪು ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳಿಗೆ ಅನುದಾನವನ್ನು ನೀಡಿದ್ದಾರೆ. ಹಾಗಾಗಿ ಕೋಟ ಶ್ರೀನಿವಾಸ ಪೂಜಾರಿ ಅವರು ಕಾಪು ವಿಧಾನಸಭಾ ಕ್ಷೇತ್ರದಲ್ಲಿ 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಲು ನಾವು ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ರಘುಪತಿ ಭಟ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ವಕ್ತಾರರಾದ ಗೀತಾಂಜಲಿ ಸುವರ್ಣ, ಪೆರ್ಡೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಜಿಯಾನಂದ ಹೆಗಡೆ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ರಾಜ್ಯ ಬಿಜೆಪಿಯ ನಿಕಟಪೂರ್ವ ಉಪಾಧ್ಯಕ್ಷರಾದ ನಯನ ಗಣೇಶ್, ಉಡುಪಿ ಜಿಲ್ಲಾ ಬಿಜೆಪಿಯ ನಿಕಟಪೂರ್ವ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಮಹಿಳಾ ಆಯೋಗದ ನಿಕಟಪೂರ್ವ ಸದಸ್ಯರಾದ ಶ್ಯಾಮಲ ಕುಂದರ್ ಹಾಗೂ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.
ಉದ್ಯಾವರ ಬೊಳ್ಜೆ ಕಾರ್ಯಕರ್ತರ ಸಭೆ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ
ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣಾ ಪೂರ್ವಭಾವಿಯಾಗಿ ಇಂದು ದಿನಾಂಕ 13-04-2024 ರಂದು ನಡೆದ ಉದ್ಯಾವರ ಬೊಳ್ಜೆ ಕಾರ್ಯಕರ್ತರ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಶಾಸಕರು ಮಾತನಾಡಿ ನರೇಂದ್ರ ಮೋದಿ ಅವರ ಸಂಕಲ್ಪ ಗೆಲ್ಲಬೇಕಾದರೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಗೆಲ್ಲಬೇಕು ಹಾಗಾಗಿ ನಾವೆಲ್ಲರೂ ಒಟ್ಟಾಗಿ ಅವರ ಗೆಲುವಿಗೆ ಶ್ರಮಿಸೋಣ ಎಂದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ವಕ್ತಾರರಾದ ವಿಜಯ್ ಕುಮಾರ್ ಉದ್ಯಾವರ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಸ್ಥಳೀಯರಾದ ಸುಂದರ್ ಕೋಟ್ಯಾನ್, ಸಂತೋಷ್ ಬೊಳ್ಜೆ ಹಾಗೂ ಪಕ್ಷದ ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಉದ್ಯಾವರ ಪಿತ್ರೋಡಿ ಕಾರ್ಯಕರ್ತರ ಸಭೆ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ
ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣಾ ಪೂರ್ವಭಾವಿಯಾಗಿ ಇಂದು ದಿನಾಂಕ 13-04-2024 ರಂದು ನಡೆದ ಉದ್ಯಾವರ ಪಿತ್ರೋಡಿ ಕಾರ್ಯಕರ್ತರ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಶಾಸಕರು ಮಾತನಾಡಿ ಬಂದು ಕಾಲದಲ್ಲಿ ಭಾರತವನ್ನು ಭಿಕ್ಷುಕರ ಹವಾಡಿಗರ ದೇಶ ಎಂದು ಕರೆಯುತ್ತಿದ್ದ ರಾಷ್ಟ್ರಗಳು ಇಂದು ಭಾರತವನ್ನು ನೋಡಿ ಕೈ ಎತ್ತಿ ಮುಗಿಯುತ್ತಿದೆ. ಇದಕ್ಕೆ ಕಾರಣ ಕಳೆದ ಹತ್ತು ವರ್ಷಗಳಲ್ಲಿ ನರೇಂದ್ರ ಮೋದಿ ಅವರು ಮಾಡಿದ ಅಭಿವೃದ್ಧಿ ಹಾಗೂ ದೂರ ದೃಷ್ಟಿಯ ಯೋಜನೆಗಳು ಹಾಗಾಗಿ ನರೇಂದ್ರ ಮೋದಿ ಅವರು ಮಗದೊಮ್ಮೆ ಪ್ರಧಾನಿಯಾಗಲು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ವಕ್ತಾರರಾದ ಗೀತಾಂಜಲಿ ಸುವರ್ಣ, ವಿಜಯ್ ಕುಮಾರ್ ಉದ್ಯಾವರ, ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷರಾದ ಸಚಿನ್, ಕಾಪು ಮಂಡಲ ಬಿಜೆಪಿ ಕಾರ್ಯದರ್ಶಿಗಳಾದ ರಾಜೇಶ್ ಕುಂದರ್, ಉದ್ಯಾವರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರವಿ ಕೋಟ್ಯಾನ್ ಹಾಗೂ ಪಕ್ಷದ ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
80 ಬಡಗಬೆಟ್ಟು ಕಾರ್ಯಕರ್ತರ ಸಭೆ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ
ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣಾ ಪೂರ್ವಭಾವಿಯಾಗಿ ಇಂದು ದಿನಾಂಕ 13-04-2024 ರಂದು ನಡೆದ 80 ಬಡಗಬೆಟ್ಟು ಕಾರ್ಯಕರ್ತರ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಪಾಧ್ಯಕ್ಷರಾದ ಉಪೇಂದ್ರ ನಾಯಕ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸಂಧ್ಯಾ ಕಾಮತ್, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಕೋಟ್ಯಾನ್, ಉಪಾಧ್ಯಕ್ಷರಾದ ರೂಪಾ ನಾಯಕ್, ರಾಜ್ಯ ಬಿಜೆಪಿಯ ನಿಕಟಪೂರ್ವ ಉಪಾಧ್ಯಕ್ಷರಾದ ನಯನ ಗಣೇಶ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಹಾಗೂ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.