ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಕಾರ್ಯಕರ್ತ ಕಾರ್ತಿಕ್ ಸುವರ್ಣ ಬಿಜೆಪಿ ಸೇರ್ಪಡೆ
Thursday, April 25, 2024
ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಎರ್ಮಾಲು ತೆಂಕ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಮಾಜಿ ಉಪಾಧ್ಯಕ್ಷರಾದ ರತ್ನಾಕರ್ ಕೋಟ್ಯಾನ್ ಅವರ ಮಗ ಹಾಗೂ ಕಾಂಗ್ರೆಸ್ ನ ಬೂತ್ ಅಧ್ಯಕ್ಷರಾದ ಕಾರ್ತಿಕ್ ಸುವರ್ಣ ಇಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಅವರು ಭಾರತೀಯ ಜನತಾ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಕಾರ್ಯದರ್ಶಿಗಳಾದ ಕೇಸರಿ ಯುವರಾಜ್, ವಕ್ತಾರರಾದ ನವೀನ್ ಎಸ್.ಕೆ ಮತ್ತು ಪವನ್ ಎರ್ಮಾಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.