ನನ್ನನ್ನು ಗೆಲ್ಲಿಸಿ, ಅಭಿವೃದ್ಧಿ ಕಾರ್ಯ ಮಾಡಲು ಅವಕಾಶ ನೀಡಿ: ಹೆಬ್ರಿಯ ಶಿವಪುರದಲ್ಲಿ ಜಯಪ್ರಕಾಶ್ ಹೆಗ್ಡೆ ಮತಯಾಚನೆ; ಮುಳ್ಳುಗುಡ್ಡೆಯ ಶ್ರೀ ಕೊರಗಜ್ಜ, ಶಿವಪುರದ ಶ್ರೀ ಶಂಕರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ
ಹೆಬ್ರಿ: ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ ಪ್ರಚಾರದಲ್ಲಿ ತೊಡಗಿರುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ, ಕಾರ್ಖಾನೆ, ಶೋ ರೂಮ್, ಮತ-ಮಂದಿರಗಳಿಗೆ ಭೇಟಿ ನೀಡಿ ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಅಭಿವೃದ್ಧಿ ಕಾರ್ಯ ಮಾಡಲು ತನಗೊಂದು ಅವಕಾಶ ನೀಡಿ ಎಂದು ಮತಯಾಚನೆ ಮಾಡುತ್ತಿದ್ದಾರೆ.
ಶುಕ್ರವಾರ ಬೆಳಗ್ಗೆ ಹೆಬ್ರಿಯ ಶಿವಪುರದ ಮುಳ್ಳುಗುಡ್ಡೆಯಲ್ಲಿರುವ ಸೋನಾ ಹಪ್ಪಳ ಉತ್ಪಾದನಾ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಲ್ಲಿ ಹೆಗ್ಡೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರೊಂದಿಗೆ ತೆರಳಿ ಮತಯಾಚನೆ ಮಾಡಿದರು.
ಇದಕ್ಕೂ ಮೊದಲು ಜಯಪ್ರಕಾಶ್ ಹೆಗ್ಡೆಯವರು ಹೆಬ್ರಿಯ ಶಿವಪುರದ ಮುಳ್ಳುಗುಡ್ಡೆಯಲ್ಲಿರುವ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ ದೇವರ ದರುಶನ ಪಡೆದರು.
ಅನಂತರ ಹೆಬ್ರಿಯ ಶಿವಪುರದಲ್ಲಿರುವ ಶ್ರೀ ಶಂಕರಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ದೇವರ ದರುಶನ ಪಡೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು ಸೇರಿದಂತೆ ಇತರರು ಹಾಜರಿದ್ದರು.