ಕೊಪ್ಪ ಹರಿಹರಪುರದಲ್ಲಿ ಮತಯಾಚನೆ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

ಕೊಪ್ಪ: ಉಡುಪಿ-ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಶನಿವಾರ ಶೃಂಗೇರಿ ವಿಧಾನಸಭಾ ಕ್ಷೇತ್ರದ  ಕೊಪ್ಪ ಹೋಬಳಿಯ ಹರಿಹರಪುರ ಗ್ರಾಮದಲ್ಲಿ   ಮತಯಾಚನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗಾಗಿ ನನಗೆ ಈ ಬಾರಿ ಒಂದು ಅವಕಾಶ ನೀಡಿ ಗೆಲ್ಲಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಟಿ.ಡಿ ರಾಜೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಂಶುಮಂತ್,  ಬ್ಲಾಕ್‌ ಕಾಂಗ್ರೆಸ್ ನ ಅಧ್ಯಕ್ಷರಾದ ಬಾಳೆ ಮನೆ ನಟರಾಜು, ಹೋಬಳಿ ಅಧ್ಯಕ್ಷರಾದ ಕೊಡ್ತಲ್ ಮಿತ್ರ, ಕಕ್ಕುಡಿಗೆ ರವಿಂದ್ರ, ರಾಜ್ಯ ಕಿಸಾನ್ ಘಟಕದ ಅಧ್ಯಕ್ಷರಾದ  ಸಚ್ಚಿನ್ ಮಿಗಾ ಹಾಗೂ ಎಲ್ಲಾ ಘಟಕದ  ಅಧ್ಯಕ್ಷರುಗಳು, ಸದಸ್ಯರು ಹಾಗೂ ಎಲ್ಲಾ ಹಿರಿಯ,ಕಿರಿಯ ನಾಯಕರು,  ಕಾರ್ಯಕರ್ತರು ಭಾಗವಹಿಸಿದ್ದರು.